ಉಡುಪಿ: ಪ್ರಸಕ್ತ ಸಾಲಿನ ‘ಬೇಟಿ ಬಚಾವೋ ಬೇಟಿ ಪಡಾವೋ’ ಅಭಿಯಾನದ ಅಂಗವಾಗಿ ನಗರದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರವರಿ 28ರಂದು ಹಮ್ಮಿಕೊಳ್ಳಲಾಗಿದ್ದ ಆಟೋಟ ಸ್ಪರ್ಧೆಗಳನ್ನು ಕಾರಣಾಂತರಗಳಿಂದ ರದ್ದುಗೊಳಿ ಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.