ವಾಹನ ಅಡ್ಡಕಟ್ಟಿ ದರೋಡೆಗೆ ಯತ್ನ ಆರೋಪ: ಮೂವರ ಬಂಧನ

ಬೈಂದೂರು: ಶಿರೂರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಫೆ.೨೧ರಂದು ರಾತ್ರಿ ವೇಳೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಾಹನಗಳನ್ನು ಅಡ್ಡಹಾಕಿ ದರೋಡೆಗೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದ್ಯಾನೀಶ್ ಮದನಿ, ಕೈಫ್, ಅದ್ನಾನ್ ಬಂಧಿತ ಆರೋಪಿಗಳು. ಉಳಿದಂತೆ ಚಾರು ಯಾನೆ ಶಾರುಖ್, ಚಪ್ಪುಯಾನೆ ಶಫಾನ್, ವಾಜೀದ್ ಮತ್ತು ನಿಶಾದ್ ಆರೋಪಿಗಳು ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಾರ್ವಜನಿಕ ವಾಹನಗಳನ್ನು ನಿಲ್ಲಿಸಿ ದರೋಡೆಗೆ ಪ್ರಯತ್ನಿ ಸುತ್ತಿದ್ದ ಏಳು ಮಂದಿ ಆರೋಪಿಗಳನ್ನು ಹಿಡಿಯಲು ಸುತ್ತುವರಿದಿದ್ದು, ಈ ವೇಳೆ ನಾಲ್ವರ ತಪ್ಪಿಕೊಂಡು ಪರಾರಿಯಾದರು ಎಂದು ತಿಳಿದುಬಂದಿದೆ. ಬಂಧಿತರಿಂದ ಚೂರಿ, ಮೊಬೈಲ್, ಕಬ್ಬಿಣದ ರಾಡ್, ಮೆಣಸಿನ ಹುಡಿಯ ಪ್ಯಾಕೇಟ್, ಮರದ ದೊಣ್ಣೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





