ಉದ್ಯೋಗ ಮೇಳ: ವಿಕಲಚೇತನರ ನೋಂದಣಿಗೆ ವೆಬ್‌ಸೈಟ್

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ.
ಮೇಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ವೆಬ್‌ಸೈಟ್ https://udyoga.skillconnet.kaushalkar.com ಮೂಲಕ ನೋಂದಾವಣಿ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





