Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ ಸಕ್ಕರೆ ಕಾರ್ಖಾನೆ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರುಜ್ಜೀವನ ಇನ್ನು ಸಾಧ್ಯವಿಲ್ಲ: ಕೆ.ಜಯಪ್ರಕಾಶ್ ಹೆಗ್ಡೆ ಅಭಿಮತ

ವಾರ್ತಾಭಾರತಿವಾರ್ತಾಭಾರತಿ24 Feb 2024 7:13 PM IST
share
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರುಜ್ಜೀವನ ಇನ್ನು ಸಾಧ್ಯವಿಲ್ಲ: ಕೆ.ಜಯಪ್ರಕಾಶ್ ಹೆಗ್ಡೆ ಅಭಿಮತ

ಉಡುಪಿ: ಕಳೆದ ಸುಮಾರು ಎರಡು ದಶಕಗಳಿಂದ ಉತ್ಪಾದನೆ ನಿಲ್ಲಿಸಿರುವ ಕರಾವಳಿ ಕರ್ನಾಟಕದ ಏಕೈಕ ಸಹಕಾರಿ ಕ್ಷೇತ್ರದ ಸಕ್ಕರೆ ಕಾರ್ಖಾನೆ ಎನಿಸಿದ ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನರುಜ್ಜೀವನ ಇನ್ನು ಸಾಧ್ಯವಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ, ಕಾರ್ಖಾನೆಯ ಮಾಜಿ ಅಧ್ಯಕ್ಷರೂ ಆಗಿರುವ ಕೆ.ಜಯಪ್ರಕಾಶ್ ಹೆಗ್ಡೆ ತನ್ನ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡ್ಬಿ, ವಿಟಿಪಿಸಿ, ಕೆನರಾ ಬ್ಯಾಂಕುಗಳ ಸಹಯೋಗದೊಂದಿಗೆ ಬೆಂಗಳೂರಿನ ಕಾಸಿಯಾ(ಕೆಎಎಸ್‌ಎಸ್‌ಐಎ) ಸಹಯೋಗದೊಂದಿಗೆ ನಗರದ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಐದು ವರ್ಷಗಳ ಅವಧಿಗೆ ತಾನು ಕಾರ್ಖಾನೆಯ ಅಧ್ಯಕ್ಷನಾಗಿರುವಾಗ ಅದನ್ನು ಲಾಭದಾಯಕ ಸ್ಥಿತಿಗೆ ತರಲು ಶಕ್ತಿಮೀರಿ ಪ್ರಯತ್ನಿಸಿದ್ದೆ. ಆದರೆ ಕೆಲವು ಕಾರಣಗಳಿಂದ ತಾನು ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಎರಡನೇ ವರ್ಷದಲ್ಲಿ ಕಾರ್ಖಾನೆ ಬಾಗಿಲು ಹಾಕುವಂತಾಯಿತು. ಕಾರ್ಖಾನೆಯನ್ನು ಮತ್ತೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದವರು ವಿವರಿಸಿದರು.

ಸದ್ಯ ಸಕ್ಕರೆ ಕಾರ್ಖಾನೆಯ ಹೆಸರಿನಲ್ಲಿರುವ 100 ಎಕರೆ ಭೂಮಿಯನ್ನು ಕೈಗಾರಿಕಾ ಇಲಾಖೆ ಪಡೆದು, ಅಲ್ಲಿ ಕೈಗಾರಿಕಾ ವಲಯವನ್ನಾಗಿ ಪರಿವರ್ತಿಸಿ ಸಣ್ಣ ಕೈಗಾರಿಕೆಗಳಿಗೆ ಅಲ್ಲಿ ಅವಕಾಶ ನೀಡಬಹುದು. ಇದರಿಂದ ಜಿಲ್ಲೆಯ ಸಾಕಷ್ಟು ಮಂದಿಗೆ ಉದ್ಯೋಗವೂ ಸಿಗುವಂತಾಗುತ್ತದೆ. ಈ ಬಗ್ಗೆ ವೇದಿಕೆಯಲ್ಲಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಗಳು ಹಾಗೂ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬಹುದಾಗಿದೆ ಎಂದವರು ಸಲಹೆ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಸವಲತ್ತು ನೀಡಿಲ್ಲ ಎಂಬುದು ನಿಜ. ಆದರೆ ಎಲ್ಲವನ್ನೂ ಬಜೆಟ್ ಮಂಡನೆಯ ವೇಳೆಯೇ ಪ್ರಕಟಿಸಬೇಕೆಂದಿಲ್ಲ. ನಂತರವೂ ಚರ್ಚೆಯ ವೇಳೆ ಬಜೆಟ್‌ಗೆ ಸೇರಿಸಲು ಸಾಧ್ಯವಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದರೆ ಬಜೆಟ್‌ಗೆ ಉತ್ತರ ನೀಡುವ ವೇಳೆ ಅದನ್ನು ಸೇರಿಸಬಹುದು. ಅಲ್ಲದೇ ಕೈಗಾರಿಕಾ ಕ್ಷೇತ್ರಕ್ಕೆ ನೀಡಿದ ಅನುದಾನವನ್ನೂ ಉಪಯೋಗಿಸಿಕೊಳ್ಳಬಹುದು ಎಂದರು.

ಅಲ್ಲದೇ ಈಗ ಜಿಎಸ್‌ಟಿಯ ಸಮಸ್ಯೆಯೂ ಇದೆ. ಸಣ್ಣ ಉದ್ಯಮಿಗಳು ಇದರಿಂದ ತುಂಬಾ ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಸಾಕಷ್ಟು ಸಣ್ಣ ಕೈಗಾರಿಕೆಗಳು ಈಗ ಮುಚ್ಚುತ್ತಿದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಗಳು ಗಮನ ಹರಿಸಬೇಕಿದೆ. ಸಮಸ್ಯೆ ಇದ್ದಾಗ ಸರಕಾರಗಳು ಸಹಾಯ ಮಾಡಬೇಕು ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಎಂಎಸ್‌ಎಂಇ ಹಾಗೂ ಗಣಿ ವಿಭಾಗ) ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಸಿಡ್ಬಿ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪಪ್ರಧಾನ ವ್ಯವಸ್ಥಾಪಕ ಬಿ.ಉಳಗಿಯನ್, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್, ಕಾಸಿಯಾದ ಉಪಾಧ್ಯಕ್ಷ ಎಂ.ಜಿ.ರಾಜಗೋಪಾಲ್, ಕೆನರಾ ಬ್ಯಾಂಕಿನ ಡಿಜಿಎಂ ರಾಜೀವ್ ತುಕ್ರಾಲ್, ಸಂಪನ್ಮೂಲ ವ್ಯಕ್ತಿ ಸಿಎ ಜತಿನ್ ಕ್ರಿಸ್ಟೋಫರ್ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಸಿಯಾದ ಅಧ್ಯಕ್ಷ ಶಶಿಧರ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ಕಾಸಿಯಾ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಣ್ಣ ಕೈಗಾರಿಕೆಗಳ ಕುರಿತು ಅರಿವು ಮೂಡಿಸುವ ಈ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತಿದ್ದು, ಈವರೆಗೆ 16 ಜಿಲ್ಲೆಗಳಲ್ಲಿ ಇಂಥ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಕಾಸಿಯಾದ ಗೌರವ ಪ್ರಧಾನ ಕಾರ್ಯದರ್ಶಿ ಎಸ್.ನಾಗರಾಜು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X