ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಗಂಗೊಳ್ಳಿ: ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಶಾಂತಿ(43) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.26ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ವೈಯಕ್ತಿಕ ಕಾರಣದಿಂದ ಮನನೊಂದ ಬೊಮ್ಮರಬೆಟ್ಟು ಗ್ರಾಮದ ಮಾಣ್ಯಾ ನಿವಾಸಿ ಸುಂದರ(68) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.25ರಂದು ಸಂಜೆ ವೇಳೆ ಮನೆಯ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





