Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ...

ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ ದಲಿತರಿಗೆ ಹಂಚುವಂತೆ ಆಗ್ರಹ: ದಲಿತರಿಂದ ಅಹೋರಾತ್ರಿ ಅನಿರ್ಧಿಷ್ಟವಾವಧಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ27 Feb 2024 7:18 PM IST
share
ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ ದಲಿತರಿಗೆ ಹಂಚುವಂತೆ ಆಗ್ರಹ: ದಲಿತರಿಂದ ಅಹೋರಾತ್ರಿ ಅನಿರ್ಧಿಷ್ಟವಾವಧಿ ಉಪವಾಸ ಸತ್ಯಾಗ್ರಹ

ಕುಂದಾಪುರ : ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿ ದಲಿತರಿಗೆ ಹಂಚದೆ ಅನ್ಯಾಯ ಎಸಗಿರುವುದಾಗಿ ಆರೋಪಿಸಿ ದಲಿತ ಸಂಘಟನೆ ಕಾರ್ಯಕರ್ತರು ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಅನಿರ್ದಿಷ್ವಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರವೂ ಮುಂದುವರೆದಿದೆ.

ಸೋಮವಾರ ರಾತ್ರಿ ಚಿಮಣಿ ಬೆಳಕಿನಲ್ಲಿ ಧರಣಿ ಸ್ಥಳದಲ್ಲಿ ಕೂತು ಪ್ರತಿಭಟನಾಕಾರರು ರಾತ್ರಿ ಕಳೆದಿದ್ದು, ಶಿರೂರಿನ ದಲಿತ ಮುಖಂಡರಾದ ರಾಘವೇಂದ್ರ ಹಾಗೂ ರಮೇಶ್ ಶಿರೂರು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು ಸ್ಥಳೀಯ ದಲಿತ ಸಂಘಟನೆ ಮುಖಂಡರು ಅವರೊಂದಿಗೆ ಕೈಜೋಡಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳೇ ಕಳೆದರೂ ಬೈಂದೂರಿನ ಶಿರೂರಿನಲ್ಲಿ ಡಿಸಿ ಮನ್ನಾ ಭೂಮಿ ಹಂಚದ ಉಡುಪಿ ಜಿಲ್ಲಾಡಳಿತವು ದಲಿತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಹಿಂದುಳಿಯುವಂತೆ ಮಾಡಿ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೋಲೆ ಮಾಡಿ ದಲಿತ ವಿರೋಧಿ ನಡವಳಿಕೆ ತೋರಿದ್ದಾರೆ. ಮುಖ್ಯಮಂತ್ರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೂ ಈ ಸತ್ಯಾಗ್ರಹ ಮಂದು ವರೆಯಲಿದೆ ಎಂದು ರಾಘವೇಂದ್ರ ಶಿರೂರು ತಿಳಿಸಿದ್ದಾರೆ.

ಈ ಸಂದರ್ಭ ಅಂಬೇಡ್ಕರ್ ಯುವಸೇನೆ ಬೈಂದೂರು ತಾಲೂಕು ಅಧ್ಯಕ್ಷ ರಾಮ ಎಂ.ಮಯ್ಯಾಡಿ, ಬೈಂದೂರು ತಾಲೂಕು ಅಂಬೇಡ್ಕರ್ ಸಂಘದ ಅಧ್ಯಕ್ಷ ರಂಗ ಯಡ್ತರೆ, ದಲಿತ ಮುಖಂಡರಾದ ಮಾದೇವ ಬಾಕಡ, ಮಹಾಲಕ್ಷ್ಮೀ ಬೈಂದೂರು, ಈಶ್ವರ್ ಶಿರೂರು, ವಾಸು ಶಿರೂರು, ಮಂಜುನಾಥ ಶಿರೂರು, ಮಂಗಳ ಶಿರೂರು, ಲಕ್ಷ್ಮಿ ಶಿರೂರು, ಚೇತನ್, ನಾರಾಯಣ ಬೈಂದೂರು, ಮಹಾದೇವ ತೊಂಡೆಮಕ್ಕಿ, ಮಹಾದೇವ ಬೈಂದೂರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಉಡುಪಿ ಜಿಲ್ಲಾ ಸಮಿತಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ನೀಡಿದರು. ಉತ್ತರ ಕನ್ನಡ ಜಿಲ್ಲೆಯಿಂದ ದಲಿತ ಸಂಘಟನೆಯ ಮುಖಂಡರು ಆಗಮಿಸಿದ್ದಾರೆ.

‘ಶಿರೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ದಲಿತ ವಿರೋಧಿ ನಿರ್ಣಯ ಕೈಗೊಳ್ಳಲಾಗುತ್ತಿದೆ. ಎಸ್ಸಿ-ಎಸ್ಟಿಗೆ ಮೀಸಲಿಟ್ಟ ಸುಮಾರು 45 ಎಕ್ರೆ ಡಿಸಿ ಮನ್ನಾಭೂಮಿ ಇದ್ದು ಇತರರು ಅದನ್ನು ಕಬಳಿಸಿದ್ದಾರೆ. ಮೀಸಲಿಟ್ಟ ಭೂಮಿ ನೀಡದಿರುವ ಜಿಲ್ಲಾಡಳಿತದ ಧೋರಣೆ ಖಂಡನೀಯ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಚುನಾಯಿತ ಜನ ಪ್ರತಿನಿಧಿಗಳು ಸ್ಪಂದನೆ ನೀಡಿಲ್ಲ. ಸಿಎಂ ಬರುವ ತನಕ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ’

-ರಾಘವೇಂದ್ರ ಶಿರೂರು, ಹೋರಾಟಗಾರರು

‘ತಾಲ್ಲೂಕು ಆಡಳಿತದ ಎದುರು ಎರಡನೇ ದಿನ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು, ತಹಶಿಲ್ದಾರ್, ಇಒ, ಪೊಲೀಸ್ ಅಧಿಕಾರಿಗಳು ಬಿಟ್ಟರೆ ಜನಪ್ರತಿನಿಧಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ಸರಕಾರದ ಯಾರೊಬ್ಬರು ನಮ್ಮ ಹೋರಾಟದ ಬಗ್ಗೆ ಕಾಳಜಿ ವಹಿಸಿಲ್ಲ. ಶಾಸಕರು ಸದನದಲ್ಲಿ ಶಿರೂರು ಭಾಗದ ದಲಿತರ ವಿಚಾರ ಮಾತನಾಡಬೇಕು. ನಮ್ಮ ಸಮಸ್ಯೆ ಬಗೆಹರಿಯದಿದ್ದರೆ ಮುಂಬರುವ ಸಂಸತ್ ಚುನಾವಣೆಯಲ್ಲಿ ದಲಿತರು ಶಕ್ತಿ ಪ್ರದರ್ಶನ ಮಾಡುತ್ತೇವೆ’

-ಮಾದೇವ ಬಾಕಡ, ದಲಿತ ಮುಖಂಡರು

‘ಎಸ್ಸಿ-ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಭೂಮಿಯನ್ನು ಭೂಮಾಲಿಕರು ಕಬಳಿಸುತ್ತಿದ್ದು ಈ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ದಲಿತರ ಕುಂದು ಕೊರತೆ ಸಭೆಯಲ್ಲಿ ಧ್ವನಿಯೆತ್ತಲಾಗಿದ್ದರೂ ಅಧಿಕಾರಿಗಳು ಸೂಕ್ತ ಕ್ರಮವಹಿಸಿಲ್ಲ. ಮೀಸಲಿಟ್ಟ ಸ್ಥಳ ಬೇರೆಯವರಿಗೆ ವರ್ಗಾವಣೆಯಾಗಬಾರದು. ಅತಿಕ್ರಮಣಕ್ಕೆ ಅವಕಾಶ ನೀಡಬಾರದು. ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಮುಂದುವರೆಯಲಿದ್ದು ಉಪವಾಸ ನಿರತರಿಗೆ ಯಾವುದೇ ಸಮಸ್ಯೆಯಾದರೆ ಸರಕಾರವೇ ನೇರ ಹೊಣೆ.

-ಮಹಾಲಕ್ಷ್ಮಿ ಬೈಂದೂರು

ಉಪವಾಸ ಸತ್ಯಾಗ್ರಹನಿರತರ ಬೇಡಿಕೆಗಳು

ದಲಿತ ವಿರೋಧಿ ನಿರ್ಣಯ ಕೈಗೊಳ್ಳುತ್ತಿರುವ ಶಿರೂರು ಗ್ರಾಪಂ ಅಧಿಕಾರಿ ಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಶಿರೂರು ಗ್ರಾಮದ ಸರ್ವೆ ನಂಬರ್ 217 /1ಆ1 ರಲ್ಲಿ ದಲಿತ ಕುಟುಂಬಗಳು ಕೃಷಿ ಭೂಮಿಗಾಗಿ ಸಲ್ಲಿಸಿರುವ ಅರ್ಜಿಗೆ ಕೂಡಲೇ ಭೂಮಿ ಮಂಜೂರು ಮಾಡಬೇಕು.

ಬೈಂದೂರು ತಾಲೂಕು ಶಿರೂರು ಗ್ರಾಮದಲ್ಲಿ ಒತ್ತುವರಿ ಆಗಿರುವ ಡಿಸಿ ಮನ್ನಾ ಭೂಮಿಯನ್ನು ತೆರವುಗೊಳಿಸಬೇಕು. ಡಿಸಿ ಮನ್ನಾ ಭೂಮಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ನಿಲ್ಲಿಸಬೇಕು. ಡಿಸಿ ಮನ್ನಾ ಭೂಮಿಯನ್ನು ಅರ್ಹ ಪರಿಶಿಷ್ಟ ಸಮುದಾಯಗಳಿಗೆ ಶೀಘ್ರವಾಗಿ ಹಂಚಿಕೆಯ ಮಾಡಬೇಕು. ಬೈಂದೂರು ತಾಲೂಕಿನಲ್ಲಿ 94 ಸಿ ಮತ್ತು ಅಕ್ರಮ-ಸಕ್ರಮ ಹೆಸರಿನಲ್ಲಿ ಆದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು.

ಶಿರೂರು ಗ್ರಾಮದ ಮುದ್ರಮಕ್ಕಿಯ ಪರಿಶಿಷ್ಟಕಾಲೋನಿಯ ದಲಿತ ಕುಟುಂಬ ಗಳು 94 ಸಿ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗೆ ಹಕ್ಕುಪತ್ರ ನೀಡಬೇಕು. ಮನೆ ಧ್ವಂಸ ಪ್ರಕರಣದ ಸಂತ್ರಸ್ತೆ ದಲಿತ ಮಹಿಳೆ ಮಂಗಳ ಇವರ ಕುಟುಂಬಕ್ಕೆ ಕೂಡಲೇ ಪುನರ್ ವಸತಿ ಕಲ್ಪಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ದೌರ್ಜನ್ಯ ಆದಾಗ ದೂರನ್ನು ಸ್ವೀಕರಿಸಲು ವಿಳಂಬ ಮತ್ತು ಕೌಂಟರ್ ಕೇಸಿನ ಭಯ ಒಡ್ಡದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಕ್ರಮ ವಹಿಸಬೇಕು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X