Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್:...

ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್: ಮೈಸೂರು ವಿವಿ, ಕಲ್ಲಿಕೋಟೆ ವಿವಿ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ27 Feb 2024 10:02 PM IST
share
ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್: ಮೈಸೂರು ವಿವಿ, ಕಲ್ಲಿಕೋಟೆ ವಿವಿ ಶುಭಾರಂಭ

ಮಣಿಪಾಲ: ಭಾರತೀಯ ವಿವಿ ಸಂಘದ ಸಹಯೋಗದೊಂದಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಇಲ್ಲಿನ ಎಂಡ್ ಪಾಯಿಂಟ್ ಮೈದಾನದಲ್ಲಿ ಯೋಜಿಸಿರುವ 2023-24ನೇ ಸಾಲಿನ ಅಖಿಲ ಭಾರತ ಅಂತರ ವಲಯ ಅಂತರ ವಿವಿ ಮಹಿಳಾ ಕ್ರಿಕೆಟ್ ಟೂರ್ನಿಯ ತಮ್ಮ ಆರಂಭಿಕ ಪಂದ್ಯಗಳಲ್ಲಿ ಮೈಸೂರು ವಿವಿ, ಕಲ್ಲಿಕೋಟೆ ವಿವಿ, ಅಮೃತಸರದ ಗುರುನಾನಕ್ ದೇವ್ ವಿವಿ, ಕೊಲ್ಹಾಪುರದ ಶಿವಾಜಿ ವಿವಿ ಹಾಗೂ ಬಿಹಾರದ ಲಲಿತ್‌ನಾರಾಯಣ್ ಮಿಥಿಲಾ ವಿವಿ ತಂಡಗಳು ಜಯ ದಾಖಲಿಸಿವೆ.

ತನ್ನ ಬಿ ಗುಂಪಿನ ಮೊದಲ ಪಂದ್ಯದಲ್ಲಿ ಮೈಸೂರು ವಿವಿ, ಬಿಲಾಸಪುರದ ಅಟಲ್‌ಬಿಹಾರಿ ವಾಜಪೇಯಿ ವಿವಿ ತಂಡವನ್ನು 213 ರನ್‌ಗಳ ಭರ್ಜರಿ ಅಂತರದಿಂದ ಪರಾಭವಗೊಳಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಮೈಸೂರು ವಿವಿ ನಿಗದಿತ ಓವರುಗಳಲ್ಲಿ 2ವಿಕೆಟ್‌ಗೆ 261 ರನ್‌ಗಳಿಸಿದ್ದಲ್ಲದೇ ನಂತರ ವಾಜಪೇಯಿ ವಿವಿಯನ್ನು ಕೇವಲ 48 ರನ್‌ಗಳಿಗೆ ಆಲೌಟ್ ಮಾಡಿತು.

ಇದೇ ಗುಂಪಿನ ಇನ್ನೊಂದು ಪಂದ್ಯದಲ್ಲಿ ಕಲ್ಲಿಕೋಟೆ ವಿವಿ, ವೀರ್ ಬಹಾದುರ್ ಸಿಂಗ್ ಪೂರ್ವಾಂಚಲ ವಿವಿಯನ್ನು 9 ವಿಕೆಟ್‌ಗಳಿಗೆ ಹಿಮ್ಮೆಟ್ಟಿಸಿತು. ಎದುರಾಳಿಯನ್ನು 112 ರನ್‌ಗಳಿಗೆ ನಿಯಂತ್ರಿಸಿದ ಕಲ್ಲಿಕೋಟೆ ವಿವಿ ಬಳಿಕ ಒಂದು ವಿಕೆಟ್ ಕಳೆದುಕೊಂಡು ವಿಜಯಿ ರನ್ ಗಳಿಸಿತು.

ಎ ಗುಂಪಿನಲ್ಲಿ ಅಮೃತಸರದ ಜಿಎನ್‌ಡಿಯು ವಿವಿ, ಪುಣೆಯ ಸಾವಿತ್ರಿ ಬಾಯಿ ಪುಲೆ ವಿವಿಯನ್ನು 43ರನ್‌ಗಳಿಂದ ಸೋಲಿಸಿತು.ಮೊದಲು ಬ್ಯಾಟಿಂಗ್ ನಡೆಸಿದ ಗುರುನಾನಕ್ ದೇವ್ ವಿವಿ 115 ರನ್‌ಗಳಿಗೆ ಆಲೌಟಾದರೆ, ಬಳಿಕ ಎದುರಾಳಿ ತಂಡವನ್ನು 72 ರನ್‌ಗಳಿಗೆ ನಿಯಂತ್ರಿಸುವ ಮೂಲಕ ಸುಲಭದ ಜಯ ಗಳಿಸಿತು.

ಸಿ ಗುಂಪಿನ ಪಂದ್ಯಗಳಲ್ಲಿ ಲಲಿತ್‌ನಾರಾಯಣ್ ಮಿಥಿಲಾ ವಿವಿ, ಕೊಟ್ಟಾಯಂನ ಮಹಾತ್ಮಗಾಂಧಿ ವಿವಿಯನ್ನು 25 ರನ್‌ಗಳಿಂದ ಮಣಿಸಿ ಮೊದಲ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್ ನಡೆಸಿ 5ವಿಕೆಟ್ 94ರನ್‌ಗಳ ಸಾಧಾರಣ ಮೊತ್ತ ಗಳಿಸಿದ ಮಿಥಿಲಾ ವಿವಿ ಬಳಿಕ ಕೊಟ್ಟಾಯಂ ತಂಡವನ್ನು 69 ರನ್‌ಗಳಿಗೆ ಆಲೌಟ್ ಮಾಡಿತು.

ಇದೇ ಗುಂಪಿನ ಎರಡನೇ ಪಂದ್ಯದಲ್ಲಿ ಶಿವಾಜಿ ವಿವಿ, ಪಂಜಾಬ್ ವಿವಿಯನ್ನು 6 ವಿಕೆಟ್‌ಗಳಿಂದ ಸೋಲಿಲಿತು. ಪಂಜಾಬ್ ವಿವಿಯನನು 65 ರನ್‌ಗಳಿಗೆ ನಿಯಂತ್ರಿಸಿದ ಶಿವಾಜಿ ವಿವಿ, ನಾಲ್ಕು ವಿಕೆಟ್‌ಗಳ ನಷ್ಟಕ್ಕೆ 66ರನ್ ಗಳಿಸಿ ಜಯಭೇರಿ ಬಾರಿಸಿತು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X