ಬಾವಿಗೆ ಬಿದ್ದು ಮಹಿಳೆ ಮೃತ್ಯು
![ಬಾವಿಗೆ ಬಿದ್ದು ಮಹಿಳೆ ಮೃತ್ಯು ಬಾವಿಗೆ ಬಿದ್ದು ಮಹಿಳೆ ಮೃತ್ಯು](https://www.varthabharati.in/h-upload/2024/04/02/1257929-020154844.webp)
ಉಡುಪಿ, ಎ.2: ಮಹಿಳೆಯೊಬ್ಬರು ಅಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.1ರಂದು ರಾತ್ರಿ ವೇಳೆ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಗೌರಿ(62) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಹೊರಗಡೆ ಹೋದ ಸಂದರ್ಭ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story