ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ
![ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ](https://www.varthabharati.in/h-upload/2024/04/24/1262768-020154844.webp)
ಕುಂದಾಪುರ: ಹೈದರಬಾದಿನಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಹಟ್ಟಿಯಂಗಡಿ ಗ್ರಾಮದ ಜಯಂತ್(38) ಎಂಬವರು ಮಾನಸಿಕವಾಗಿ ನೊಂದು ಎ.23ರಂದು ರಾತ್ರಿ ವೇಳೆ ಹಟ್ಟಿಯಂಗಡಿ ಗ್ರಾಮದ ಪಾರ್ತಿಕಟ್ಟೆ ಎಂಬಲ್ಲಿರುವ ರೈಲ್ವೆ ಹಳಿಯಲ್ಲಿ ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story