ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
ಕುಂದಾಪುರ: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೇ 5ರಂದು ಬೆಳಗ್ಗೆ ಕುಂದಾಪುರ ಪುಡ್ ಮಾರ್ಕ್ ಹೊಟೇಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ರಾಧಾ(71) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿಯು ರಸ್ತೆ ದಾಟಲು ನಿಂತುಕೊಂಡಿದ್ದ ರಾಧಾ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಲಾರಿ ಚಕ್ರ ರಾಧಾ ಅವರ ಸೊಂಟದ ಮೇಲೆ ಹರಿದು ಮುಂದೆ ಸಾಗಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story