ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ ಖಂಡಿಸಿ ಪ್ರತಿಭಟನೆ

ಪ್ರಜ್ವಲ್ ರೇವಣ್ಣ
ಕುಂದಾಪುರ, ಮೇ 16: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಕುಂದಾಪುರ ಕಾರ್ಮಿಕ ಭವನದ ವಠಾರದಲ್ಲಿ ಪ್ರತಿಭಟನೆ ಜರಗಿತು.
ಪ್ರಜ್ವಲ್ ತನ್ನ ಮೇಲೆ ಆರೋಪ ಬರುತ್ತಿದ್ದಂತೆಯೇ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿರುವುದನ್ನು ಖಂಡನೀಯವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ರುವ ಸಂಸದ ಪ್ರಜ್ವಲ್ ರೇವಣ್ಣರವರ ಈ ನಡೆ ಸರಿಯಲ್ಲ. ಪ್ರಜ್ವಲ್ ಅವರನ್ನು ಆದಷ್ಟು ಬೇಗ ಬಂಧಿಸಿ, ಎಲ್ಲಾ ಕಾನೂನು ಕ್ರಮ ವಹಿಸಬೇಕು ಎಂದು ಸಂಘದ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸರಕಾರವನ್ನು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಕೃಷಿಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾದು, ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ, ಕೂಲಿಕಾರರ ಮುಖಂಡರಾದ ಕವಿರಾಜ್ ಎಸ್., ನಾಗರತ್ನ ನಾಡ, ಸತೀಶ ಖಾರ್ವಿ, ಸುರೇಶ ಖಾರ್ವಿ, ರಾಮ ಕಟ್ಟ್ ಬೆಲ್ತೂರು ಮೊದಲಾದವರು ಉಪಸ್ಥಿತರಿದ್ದರು.
Next Story