ಡೆಂಗಿ, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಉಡುಪಿ ಡಿಸಿ ವಿದ್ಯಾಕುಮಾರಿ
![ಡೆಂಗಿ, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಉಡುಪಿ ಡಿಸಿ ವಿದ್ಯಾಕುಮಾರಿ ಡೆಂಗಿ, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಉಡುಪಿ ಡಿಸಿ ವಿದ್ಯಾಕುಮಾರಿ](https://www.varthabharati.in/h-upload/2024/05/16/1266940-ud-m16-jagruthi-jatha.webp)
ಉಡುಪಿ, ಮೇ16: ಡೆಂಗಿ ಹಾಗೂ ಮಲೇರಿಯಾ ಕುರಿತು ಜನಸಾಮಾನ್ಯ ರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ನಗರಸಭೆ ಉಡುಪಿ, ವಿದ್ಯಾರತ್ನ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ನರ್ಸಿಂಗ್ ಕಾಲೇಜ್, ಮಿತ್ರ ಸ್ಕೂಲ್ ಆಫ್ ನರ್ಸಿಂಗ್, ಎಲ್.ಎಮ್.ಹೆಚ್ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂಗಿ ದಿನಾಚರಣೆ ಹಾಗೂ ವಿಶ್ವ ಮಲೇರಿಯಾ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಆಯೋಜಿಸಲಾಗಿತ್ತು.
ಜಾಥಾವು ಬೋರ್ಡ್ ಹೈಸ್ಕೂಲ್ನಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಪುರಭವನದಲ್ಲಿ ಸಮಾಪನಗೊಂಡಿತು.
ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಮಲೇರಿಯಾ ಹಾಗೂ ಡೆಂಗಿ ನಿಯಂತ್ರಣ ದಲ್ಲಿ ಸಮುದಾಯದ ಪಾತ್ರ ಅತೀ ಮುಖ್ಯ. ಈ ರೋಗಗಳಿಂದ ಆಗುವ ಅಪಾಯಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದಲೇ ಜಾಥಾವನ್ನು ಕೈಗೊಳ್ಳಲಾಗಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸ ಬೇಕು ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿ ಕೊಳ್ಳಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಟ್ಟುಕೊಳ್ಳುವುದು, ಮೈತುಂಬಾ ಬಟ್ಟೆಗಳನ್ನು ಧರಿಸುವುದು, ಮಲಗುವಾಗ ಸೊಳ್ಳೆಪರದೆ ಬಳಸಬೇಕು ಎಂದರು.
ಜನಸಾಮಾನ್ಯರಲ್ಲಿ ಡೆಂಗಿ ಹಾಗೂ ಮಲೇರಿಯದಂತೆ ಸಾಂಕ್ರಾಮಿಕ ರೋಗದ ಲಕ್ಷಣ ಹಾಗೂ ಅದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಆಶಾ ಕಾರ್ಯಕರ್ತೆ ಯರು ನೀಡಬೇಕು ಎಂದರು.
ಜಾಥಾದಲ್ಲಿ ಉಡುಪಿ ಆಸುಪಾಸಿನ ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಗಳು, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಗಿ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಐ.ಪಿ ಗಡಾದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ ಪ್ರಶಾಂತ್ ಭಟ್, ನಗರಸಭೆ ಪೌರಾಯುಕ್ತ ರಾಯಪ್ಪ, ಎಂಟಾಮೋಲಜಿಸ್ಟ್ ಮುಕ್ತಾ, ಹಿರಿಯ ಆರೋಗ್ಯ ನಿರೀಕ್ಷಣಾ ಧಿಕಾರಿ ಸತೀಶ್ ರಾವ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿ ಕಾರಿಗಳಾದ ಬಸವರಾಜ್, ವಸಂತ್, ರಾಮಚಂದ್ರ ಹಾಗೂ ನರ್ಸಿಂಗ್ ಕಾಲೇಜುಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.