Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಂಕಣ ರೈಲ್ವೆ ಮಾರ್ಗದಲ್ಲಿ ತಪ್ಪಿದ ರೈಲು...

ಕೊಂಕಣ ರೈಲ್ವೆ ಮಾರ್ಗದಲ್ಲಿ ತಪ್ಪಿದ ರೈಲು ದುರಂತ: ಉಡುಪಿ, ಸುರತ್ಕಲ್‌ನಲ್ಲಿ ನಿಂತ ರೈಲುಗಳು

► ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ► ಸಿಎಂಡಿ ಝಾರಿಂದ 25,000ರೂ.ನಗದು ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ26 May 2024 5:18 PM IST
share
ಕೊಂಕಣ ರೈಲ್ವೆ ಮಾರ್ಗದಲ್ಲಿ ತಪ್ಪಿದ ರೈಲು ದುರಂತ: ಉಡುಪಿ, ಸುರತ್ಕಲ್‌ನಲ್ಲಿ ನಿಂತ ರೈಲುಗಳು

ಉಡುಪಿ: ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಮಧ್ಯರಾತ್ರಿ 2:25ರ ಸುಮಾರಿಗೆ ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬದ್ರಿ ನಡುವೆ ರೈಲ್ವೆ ಹಳಿಯಲ್ಲಿ ಹಳಿ ಜಾಯಿಂಟ್ ಜಾರಿರುವುದನ್ನು ಪತ್ತೆ ಹಚ್ಚುವ ಮೂಲಕ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ.

ಘಟನೆ ಶನಿವಾರ ಮಧ್ಯರಾತ್ರಿಯ ಬಳಿಕ ನಡೆದಿದೆ. ಟ್ರ್ಯಾಕ್ ಜಾಯಿಂಟ್ ತಪ್ಪಿರುವುದನ್ನು ಕತ್ತಲಲ್ಲೇ ಪತ್ತೆ ಹಚ್ಚಿದ ಪ್ರದೀಪ್ ಶೆಟ್ಟಿ ತಕ್ಷಣ ಅದನ್ನು ಉಡುಪಿಯಲ್ಲಿದ್ದ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಹಿರಿಯ ಅಧಿಕಾರಿಗಳು ತಕ್ಷಣ ಆರ್‌ಎಂಇ (ದುರಸ್ಥಿ ಸಲಕರಣೆಗಳಿರುವ ವಾಹನ)ದೊಂದಿಗೆ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಹಳಿಯನ್ನು ದುರಸ್ಥಿ ಗೊಳಿಸಿದರು. ಇದಕ್ಕೆ ಮೂರು ಗಂಟೆ ತಗಲಿದ್ದು, ಈ ಮಧ್ಯೆ ಮಾರ್ಗದಲ್ಲಿ ಬಂದ ರೈಲುಗಳನ್ನು ಉಡುಪಿ ಹಾಗೂ ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ತಡೆ ಹಿಡಿಯಲಾಯಿತು ಎಂದು ಕೊಂಕಣ ರೈಲ್ವೆಯ ಮಂಗಳೂರು ಪಿಆರ್‌ಓ ಸುಧಾ ಕೃಷ್ಣಮೂರ್ತಿ ತಿಳಿಸಿದರು.

ಇನ್ನಂಜೆ ಹಾಗೂ ಪಡುಬಿದ್ರಿಯ ನಡುವೆ 706/02-04ನಲ್ಲಿ ಹಳಿಯ ಜಾಯಿಂಟ್ ತಪ್ಪಿದ್ದನ್ನು ಪ್ರದೀಪ್ ಶೆಟ್ಟಿ ಕತ್ತಲಲ್ಲೇ ಪತ್ತೆ ಹಚ್ಚಿದ್ದರು. ಅವರಿಂದ ಮಾಹಿತಿ ಪಡೆದ ರೈಲ್ವೆ ಸಿಬ್ಬಂದಿಗಳು ಬಂದು ಹಳಿ ದುರಸ್ತಿಗೊಳಿಸಿದರು.

ಈ ನಡುವೆ ಮುಂಬೈಯಿಂದ ಬಂದ ನೇತ್ರಾವತಿ ಎಕ್ಸ್‌ಪ್ರೆಸ್‌ನ್ನು ಉಡುಪಿಯಲ್ಲಿ ಹಾಗೂ ಬೆಂಗಳೂರಿಂದ ಕಾರವಾರಕ್ಕೆ ತೆರಳುತ್ತಿದ್ದ ಪಂಚಗಂಗಾ ಎಕ್ಸ್‌ಪ್ರೆಸ್‌ನ್ನು ಸುರತ್ಕಲ್‌ನಲ್ಲಿ ತಡೆ ಹಿಡಿಯಲಾಯಿತು. ದುರಸ್ಥಿಯ ಬಳಿಕ ಈ ರೈಲುಗಳು ಮೂರು ಗಂಟೆಗಳ ವಿಳಂಬವಾಗಿ ತಮ್ಮ ಸಂಚಾರವನ್ನು ಪುನರಾರಂಭಿಸಿದವು.

ಬಹುಮಾನ ಘೋಷಣೆ: ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಅವರು ಮಧ್ಯರಾತ್ರಿ ಕತ್ತಲಲ್ಲಿ ಹಳಿ ಜಾಯಿಂಟ್ ತಪ್ಪಿರುವುದನ್ನು ಪತ್ತೆ ಹಚ್ಚಿರುವುದಕ್ಕಾಗಿ ಕೊಂಕಣ ರೈಲ್ವೆಯ ನೂತನ ಸಿಎಂಡಿ ಸಂತೋಷಕುಮಾರ್ ಝಾ ಅವರು 25,000ರೂ.ನಗದು ಬಹುಮಾನ ಘೋಷಿಸಿದ್ದು, ಅದನ್ನು ಇಂದೇ ಪ್ರದೀಪ್ ಶೆಟ್ಟಿ ಅವರಿಗೆ ನೀಡಲು ಸೂಚಿಸಿದ್ದರು.

ಅದರಂತೆ ಉಡುಪಿಯ ಸೀನಿಯರ್ ಇಂಜಿನಿಯರ್ ಗೋಪಾಲಕೃಷ್ಣ ಅವರು ದುರಸ್ತಿ ಕೆಲಸ ನಡೆದ ಸ್ಥಳದಲ್ಲಿ ಪ್ರದೀಪ್ ಶೆಟ್ಟಿ ಅವರಿಗೆ ಚೆಕ್‌ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಡುಪಿಯ ಸೆಕ್ಷನ್ ಇಂಜಿನಿಯರ್ ಮೋಹನ್, ಸುರತ್ಕಲ್ ಸ್ಟೇಶನ್‌ನ ಸುಪರಿಂಟೆಂಡೆಂಟ್ ರವಿರಾಜ್ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X