ವೈದಿಕ ಧರ್ಮದ ಪ್ರಚಾರಕ್ಕಾಗಿ ಮಕ್ಕಳನ್ನು ವಿದ್ಯಾಪೀಠಕ್ಕೆ ಸೇರಿಸಿ: ಪುತ್ತಿಗೆ ಸ್ವಾಮೀಜಿ

ಉಡುಪಿ, ಮೇ 26: ಸಮಾಜದಲ್ಲಿ ಧರ್ಮ ಸ್ಥಾಪನೆಯಾಗಬೇಕಾದರೆ ಪುರೋಹಿತರ ಪಾತ್ರ ಬಹುಮುಖ್ಯವಾದದ್ದು. ಇಂತಹ ಪುರೋಹಿತರ ಸಂರಕ್ಷಣೆ ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ. ಪುರೋಹಿತರ ಸಂರಕ್ಷಣೆಗಾಗಿ ವೈದಿಕ ಧರ್ಮದ ಪ್ರಚಾರ ಕ್ಕಾಗಿ ಎಲ್ಲರೂ ತಮ್ಮ ಮಕ್ಕಳನ್ನು ವಿದ್ಯಾಪೀಠಕ್ಕೆ ಸೇರಿಸಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರವಿವಾರ ನಡೆದ ಪುತ್ತಿಗೆ ವಿದ್ಯಾ ಪೀಠದ 37ನೆಯ ಘಟಿಕೋತ್ಸವದ ಅಧ್ಯಕ್ಷತೆ ಯನ್ನು ವಹಿಸಿ ಅವರು ಮಾತ ನಾಡುತಿದ್ದರು. ಇಂದಿನ ಯಾಂತ್ರಿಕ ವಾತಾವರಣದ ಪ್ರಭಾವದಲ್ಲಿ ಎಲ್ಲರೂ ಇಂಜಿನಿಯ ರಿಂಗ್ -ಮೆಡಿಕಲ್ ಮುಂತಾದ ಲೌಕಿಕ ಶಿಕ್ಷಣವನ್ನು ಬಯಸುತ್ತಿ ದ್ದಾರೆ. ಆದರೆ ಪುರೋಹಿತರು ವಿಶ್ವದ ಕ್ಷೇಮವನ್ನು ನಿಸ್ವಾರ್ಥವಾಗಿ ಬಯಸುತ್ತಿ ದ್ದಾರೆ. ಇಂಥಹ ಪುರೋಹಿತರ ನಿರ್ಮಾಣ ಅತ್ಯಗತ್ಯವಾಗಿದೆ ಎಂದರು.
ಶ್ರೀಕಣ್ವ ಮಠದ ಪೀಠಾಧಿಪತಿ ಶ್ರಿ ವಿದ್ಯಾಕಣ್ವ ವಿರಾಜತೀರ್ಥ ಸ್ವಾಮೀಜಿ ಮುಖ್ಯ ಅತಿಥಿಯಾಗಿದ್ದರು. ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೇಂದ್ರ ತೀರ್ಥ ಸ್ವಾಮೀಜಿ ಅನುಗ್ರಹಿಸಿದರು. ಮಂಗಳೂರಿನ ಕದ್ರಿ ದೇವಸ್ಥಾನದ ಅರ್ಚಕ ವೇದ ಮೂರ್ತಿ ಪ್ರಭಾಕರ ಅಡಿಗರು ಸಂಪಾದಿಸಿರುವ ಉದಕ ಶಾಂತಿ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಗ್ರಿ ರಾಘವೇಂದ್ರ ಉಪಾಧ್ಯಾಯರು, ಶತಾವಧಾನಿ ರಾಮನಾಥ ಆಚಾರ್ಯ ಉಡುಪಿ, ಪ್ರಕಾಶಾ ಚಾರ್ಯ ಮುಂಬೈ, ರಾಮ ದಾಸ ಉಪಾಧ್ಯಾಯ ಮುಂಬೈ, ರಾಜೇಶ್ ಭಟ್ ಮುಂಬೈ, ಪ್ರವೀಣಾ ಚಾರ್ಯ ಚೆನ್ನೈ, ಕುಂಭಾಸಿ ಸೂರ್ಯನಾರಾಯಣ ಉಪಾಧ್ಯಾಯರು, ಶ್ರೀನಿವಾಸಾಚಾರ್ಯ ಹೊನ್ನೆದಿಬ್ಬ ಬೆಳಗಾಂ, ವಿಜಯಸಿಂಹಾ ಚಾರ್ಯ ತೋಟಂತಿಲ್ಲಾಯ, ಶ್ರೀಪತಿ ಆಚಾರ್ಯ ಪಾಡಿಗಾರು, ಪಂಜ ಭಾಸ್ಕರ್ ಭಟ್, ವಿದ್ವಾನ್ ಕೇಂಜ ಶ್ರೀಧರ ತಂತ್ರಿ, ಶ್ರೀಧರ ಉಪಾಧ್ಯಾಯ ಕುಂಭಾಶಿ, ಶಿಕ್ಷಣ ತಜ್ಞ ರೋಹಿತ್ ಚಕ್ರತೀರ್ಥ ಮೊದಲಾದವರು ಉಪಸ್ಥಿತರಿದ್ದರು.
ಪುತ್ತಿಗೆ ವಿದ್ಯಾಪೀಠದ ಪ್ರಾಚಾರ್ಯರಾದ ಶ್ರೀನಿಧಿ ಆಚಾರ್ಯ ಸ್ವಾಗತಿಸಿದರು. ಡಾ.ಬಿ.ಗೋಪಾಲಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಯೋಗೀಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.







