ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
![ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ](https://www.varthabharati.in/h-upload/2024/06/10/1271322-3.webp)
ಕಾಪು : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮೂಳೂರು ನಿವಾಸಿ ಪ್ರೀತಮ್ ಎಂಬವರು ಜೂ.7ರಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಗೋಳಿಹೊಳೆ ಗ್ರಾಮದ ರಬ್ಬರ್ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೇರಳ ಪಾಲಕಾಡ್ ಜಿಲ್ಲೆಯ ಉನ್ನಿ ಕುಟ್ಟನ್(21) ಎಂಬವರು ಜೂ.೮ರಂದು ಕೇರಳಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story