ಮನೆಗೆ ನುಗ್ಗಿ ಚಿನ್ನಾಭರಣ ಕಳವು
![ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮನೆಗೆ ನುಗ್ಗಿ ಚಿನ್ನಾಭರಣ ಕಳವು](https://www.varthabharati.in/h-upload/2024/06/11/1271499-348441-1662394151.webp)
ಸಾಂದರ್ಭಿಕ ಚಿತ್ರ
ಕುಂದಾಪುರ, ಜೂ.11: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿರುವ ಘಟನೆ ಜೂ.10ರಂದು ಮಧ್ಯಾಹ್ನ ವೇಳೆ ಕಟ್ಬೆಲ್ತೂರು ಎಂಬಲ್ಲಿ ನಡೆದಿದೆ.
ರೇಖಾ ಎಂಬವರು ಮನೆಗೆ ಬೀಗ ಹಾಕಿ ಕುಂದಾಪುರಕ್ಕೆ ಹೋಗಿದ್ದು, ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಹಿಂಬದಿಯ ಬಾಗಿಲಿನ ಚಿಲಕ ತೆಗೆದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿ ಕೊಂಡು ಹೋಗಿರುವುದಾಗಿ ದೂರಲಾಗಿದೆ.
ಕಳವಾದ ವಸ್ತುಗಳ ಒಟ್ಟು ಮೌಲ್ಯ 6,30,000ರೂ. ಎಂದು ಅಂದಾಜಿಸ ಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story