ಪೆಟ್ರೋಲ್, ಡೀಸೆಲ್ ದರ ಹೆಚ್ಚಳ: ಶಾಸಕ ಗಂಟಿಹೊಳೆ ಖಂಡನೆ
ಬೈಂದೂರು, ಜೂ.16: ಗ್ಯಾರಂಟಿ ಯೋಜನೆಯನ್ನೂ ಸಮರ್ಪಕವಾಗಿ ಅನುಷ್ಠಾನ ಮಾಡದೇ, ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡದೇ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯರಿಗೆ ದೊಡ್ಡ ಆರ್ಥಿಕ ಹೊರ ನೀಡುತ್ತಿದೆ ಎಂದು ಆರೋಪಿಸಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗಿದ್ದು, ತುಂಬಿಸಲು ಜನ ಸಾಮಾನ್ಯರ ಜೇಬಿಗೆ ಕೈ ಹಾಕಿರುವುದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ರಾಜ್ಯ ಸರ್ಕಾರದ ಜನ ವಿರೋಧಿ ನಿಲುವಿಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story