ಹೆತ್ತವರ ಬಿಗಿ ಹಿಡಿತ ಮಕ್ಕಳಿಗೆ ಶ್ರೀರಕ್ಷೆ: ದಿನಕರ ಶೆಟ್ಟಿ

ಉದ್ಯಾವರ, ಜೂ.24: ಮಕ್ಕಳ ಪ್ರತಿ ನಡೆಯಲ್ಲೂ ಹೆತ್ತವರ ಬಿಗಿ ಹಿಡಿತ ಅವರ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗು ತ್ತದೆ ಎಂದು ಬಸ್ರೂರು ನಿವೇದಿತಾ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಿನಕರ ಆರ್ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ.
ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ - ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಶಾಲಾ ವಿದ್ಯಾರ್ಥಿ ಗಳ ಹೆತ್ತವರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು.
ಶಾಲಾ ಆಡಳಿತ ಮಂಡಳಿಯ ಸಂಚಾಲಕ ಸುರೇಶ್ ಶೆಣೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಗಣಪತಿ ಕಾರಂತ, ಸದಸ್ಯರಾದಕೃಷ್ಣಕುಮಾರ್ ರಾವ್ ಮಟ್ಟು, ಉದ್ಯಾವರ ನಾಗೇಶ್ ಕುಮಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸಂಧ್ಯಾವಾಸು, ಉಪಾಧ್ಯಕ್ಷೆ ಜ್ಯೋತಿ ರವೀಂದ್ರ ಶೆಟ್ಟಿ, ಕಾರ್ಯದರ್ಶಿ ಹೇಮಲತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
ಶಾಲಾ ಶಿಶು ವಿಕಾಸ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ನವೀನ್ ಅಮೀನ್ ಉದ್ಯಾವರ ನೀಡಿದ ಕುರ್ಚಿಗಳನ್ನು ಸ್ವೀಕ ರಿಸಿ ಅವರನ್ನು ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ರತಿ ಸ್ವಾಗತಿಸಿದರು. ಸಹಶಿಕ್ಷಕಿ ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸುಜಾತ ಶೆಟ್ಟಿ ವಂದಿಸಿದರು.





