ಕಾರು- ಬೈಕ್ ಢಿಕ್ಕಿ: ಸವಾರ ಮೃತ್ಯು, ಇಬ್ಬರಿಗೆ ಗಾಯ

ಹೆಬ್ರಿ, ಜೂ.25: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜೂ.24ರಂದು ಸಂಜೆ ವೇಳೆ ವರಂಗ ಗ್ರಾಮದ ಕೆಲಕಿಲ ಸೇತುವೆ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ವಿಶ್ವನಾಥ ಎಂದು ಗುರುತಿಸಲಾಗಿದೆ. ಸಹ ಸವಾರ ಮರ್ಣೆ ಗ್ರಾಮದ ರವಿ(32) ಎಂಬವರು ಗಾಯಗೊಂಡಿದ್ದಾರೆ. ಹೆಬ್ರಿಯಿಂದ ಅಜೆಕಾರು ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸವಾರರಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ವಿಶ್ವನಾಥ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತ್ರೇಸಿಯಮ್ಮ ಎಂಬವರು ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





