ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಮಣಿಪಾಲ, ಜೂ.26: ಮಣಿಪಾಲ ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗ ಹಾಗೂ ಮಣಿಪಾಲ ಪೋಲಿಸರ ಸಹಯೋಗದೊಂದಿಗೆ ಅಂತಾ ರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ಬುಧವಾರ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಮಾಹೆಯ ಭದ್ರತಾ ಅಧಿಕಾರಿ ಕರ್ನಲ್ ವಿಜಯ್ ರೆಡ್ಡಿ ಮಾದಕ ವಸ್ತುಗಳಿಂದ ಆಗುವ ಅನಾಹುತಗಳ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮಾದಕ ದ್ರವ್ಯಗಳು ಹಾಗೂ ಅದರ ದುರು ಪಯೋಗ ಮತ್ತು ಸಂಬಂಧಪಟ್ಟ ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಮಾಹೆ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ನಿರ್ದೇಶಕಿ ಡಾ.ಗೀತಾಮಯ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ನಿರ್ದೇಶಕ ಡಾ.ಅರವಿಂದ್ ಪಾಂಡೆ ವಂದಿಸಿದರು. ಆಪ್ತ ಸಮಾಲೋಚಕಿ ಶಿಲ್ಪಾಜೋಶಿ ಕಾರ್ಯಕ್ರಮ ನಿರೂಪಿಸಿದರು.
Next Story





