Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಂತಮೂರ್ತಿ ಕುರಿತ ಸಂಶೋಧನೆ:...

ಅನಂತಮೂರ್ತಿ ಕುರಿತ ಸಂಶೋಧನೆ: ಪ್ರೊ.ವರದೇಶ ಹಿರೇಗಂಗೆಗೆ ಡಾಕ್ಟರೇಟ್

ವಾರ್ತಾಭಾರತಿವಾರ್ತಾಭಾರತಿ26 Jun 2024 7:23 PM IST
share
ಅನಂತಮೂರ್ತಿ ಕುರಿತ ಸಂಶೋಧನೆ: ಪ್ರೊ.ವರದೇಶ ಹಿರೇಗಂಗೆಗೆ ಡಾಕ್ಟರೇಟ್

ಉಡುಪಿ, ಜೂ.26: ವಿಶ್ವಮಾನ್ಯರಾಗಿದ್ದ ಕನ್ನಡದ ಅಗ್ರಗಣ್ಯ ಕಾದಂಬರಿಕಾರ, ಲೇಖಕ ಹಾಗೂ ಚಿಂತಕರಾಗಿದ್ದ ಪ್ರೊ. ಯು.ಆರ್. ಅನಂತಮೂರ್ತಿ ಅವರ ‘ಶೈಕ್ಷಣಿಕ ತತ್ವಜ್ಞಾನ’ದ (ಪಿಲಾಸಫಿ ಆಫ್ ಎಜ್ಯುಕೇಷನ್) ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲದ ಪ್ರೊ.ವರದೇಶ ಹಿರೇಗಂಗೆ ಅವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಪ್ರಸ್ತುತ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್‌ನ (ಜಿಸಿಪಿಎಎಸ್) ಮುಖ್ಯಸ್ಥ ರಾಗಿರುವ ಪ್ರೊ. ವರದೇಶ್ ಹಿರೇಗಂಗೆ ಇವರು, ಸದ್ಯ ಆಂಧ್ರಪ್ರದೇಶದ ಅಪೋಲೋ ವಿಶ್ವವಿದ್ಯಾಲಯದ ಕುಲಪತಿ ಗಳಾಗಿರುವ ಡಾ.ಎಚ್.ವಿನೋದ್ ಭಟ್ ಮಾರ್ಗದರ್ಶನದಲ್ಲಿ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು.

ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರಾಗಿರುವ ಪ್ರೊ.ಅನಂತಮೂರ್ತಿ ತಮ್ಮ ವೃತ್ತಿಜೀವನದಲ್ಲಿ ಮೈಸೂರು ವಿಶ್ವವಿದ್ಯಾಲಯ ದಲ್ಲಿ ಇಂಗ್ಲೀಷ್ ಪ್ರಾಧ್ಯಾಪಕ ರಾಗಿ ಹಾಗೂ ನಾಲ್ಕು ವರ್ಷ ಕೇರಳದ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಗಳಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರೊ.ಹಿರೇಗಂಗೆ ಅವರು ತನ್ನ ಸಂಶೋಧನಾ ಪ್ರಬಂಧವನ್ನು ಪೌರಾತ್ಯ ಹಾಗೂ ಪಾಶ್ಚಿಮಾತ್ಯ ದೃಷ್ಠಿಕೋನಗಳ ಹಿನ್ನೆಲೆ ಯೊಂದಿಗೆ ಪ್ರೊ.ಯುಆರ್‌ಎ ಅವರ ಆತ್ಮಕಥೆ, ಶಿಕ್ಷಣದ ಕುರಿತ ಅವರ ಮಾತು ಮತ್ತು ಲೇಖನಗಳು, ಘಟಿಕೋತ್ಸವ ಭಾಷಣಗಳು, ತರಗತಿಯಲ್ಲಿನ ಅವರ ಉಪನ್ಯಾಸಗಳು ಮತ್ತು ಸಂದರ್ಶನಗಳನ್ನು ಆಧರಿಸಿ ಸಿದ್ಧಪಡಿಸಿದ್ದಾರೆ.

ಸಂಶೋಧನೆಯು ಪ್ರೊ.ಮೂರ್ತಿಯವರ ಪ್ರಸಿದ್ಧ ಪರಿಕಲ್ಪನೆಗಳಾದ ‘ಆಧುನಿಕತೆ, ಸಮಾನತೆ ಮತ್ತು ಆಧ್ಯಾತ್ಮಿಕತೆ’ ಇವುಗಳ ಆಚೆಗೆ ಹೋಗಿ ಇವರ ತಾತ್ವಿಕತೆಯನ್ನು ‘ಕೋ ಎಗೆಲೆಟೇರಿಯನ್ ಅದ್ವೈತಿಸಂ’ಎಂದು ಗುರುತಿಸುತ್ತದೆ. ಅವರ ಶೈಕ್ಷಣಿಕ ಪರಿಕಲ್ಪನೆಗಳಾದ ‘ಸಮಾನತೆ, ಶ್ರೇಷ್ಠತೆ ಮತ್ತು ವಿಸ್ತರಣೆ’ ಇವುಗಳ ಆಚೆಗೆ ಹೋಗಿ ಶಿಕ್ಷಣದ ಉದ್ದೇಶ, ಪಠ್ಯ ಕ್ರಮ, ಶೈಕ್ಷಣಿಕ ವಿಧಾನಗಳು, ಶಿಕ್ಷಕ, ಶೈಕ್ಷಣಿಕ ಮಾಧ್ಯಮ ಮತ್ತು ಶೈಕ್ಷಣಿಕ ಮುಂದಾಳತ್ವದ ಪಾತ್ರವನ್ನು ವಿಶ್ಲೇಷಿಸುತ್ತದೆ.

ಡಾ.ಯುಆರ್‌ಎ ಅವರ ಚಿಂತನೆಯಲ್ಲಿ ಸಾಮಾನ್ಯವಾಗಿ ಗುರುತಿಸಲಾಗುವ ಸಮಾಜವಾದ ಮತ್ತು ಅಸ್ತಿತ್ವವಾದಿ ನೆಲೆಗಳ ಆಚೆಗೆ ಹೋಗಿ, ಸಂಶೋಧನೆ ಅವರ ಯೋಚನೆಯಲ್ಲಿ ಗಾಂಧೀಜಿ, ಗುರುದೇವ ಠಾಗೋರ್ ಮತ್ತು ಡಾ. ಅಂಬೇಡ್ಕರ್ ಚಿಂತನೆಯ ಅಂಶಗಳನ್ನು ಪ್ರೊ.ಹಿರೇಗಂಗೆ ಗುರುತಿಸಿದ್ದಾರೆ.

ಆರಂಭದ ಕೆಲವು ವರ್ಷಗಳ ಕಾಲ ಬೆಂಗಳೂರು ಮತ್ತು ಮಂಗಳೂರಿನಲ್ಲಿ ವರದೇಶ್ ಹಿರೇಗಂಗೆ ಪತ್ರಕರ್ತರಾಗಿದ್ದುರು. ಬಳಿಕ ಮಾಹೆಯ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಂಮ್ಯುನಿಕೇಷನ್‌ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಸಂಶೋಧನಾ ಮಾರ್ಗದರ್ಶಿ ಡಾ.ಎಚ್. ವಿನೋದ್ ಭಟ್ ಅವರು ಮುಂಚೆ ಮಾಹೆಯ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X