Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು...

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಿ: ಉಡುಪಿ ಡಿಸಿ ಡಾ.ಕೆ. ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ26 Jun 2024 7:27 PM IST
share
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಿ: ಉಡುಪಿ ಡಿಸಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ, ಜೂ.26: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 30 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆ ಯನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ಗಳನ್ನು ನೀಡಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂನ್ 30ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾ ಗುವ ಎಲ್ಲಾ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ಚ್ಛಕ್ತಿಯಿಂದ ಬೆಳಕಿನ ವ್ಯವಸ್ಥೆ ಸೇರಿದಂತೆ ಇತರೆಲ್ಲಾ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪರೀಕ್ಷೆ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಪರೀಕ್ಷೆ ಅಂದು ಬೆಳಗ್ಗೆ 9:00ರಿಂದ ಅಪರಾಹ್ನ 12:00ರವರೆಗೆ ನಡೆಯಲಿದ್ದು, ಇದರಲ್ಲಿ ಒಟ್ಟು 960 ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎರಡನೇ ಹಂತದ ಪರೀಕ್ಷೆ ಅಪರಾಹ್ನ 2:00ರಿಂದ 4:30ರವರೆಗೆ ನಡೆಯ ಲಿದ್ದು ಇದರಲ್ಲಿ ಒಟ್ಟು 1653 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿ ದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿ ಸೇರಿದಂತೆ ಯಾರೊಬ್ಬರೂ ಮೊಬೈಲ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದ ಅವರು, ಪ್ರತಿ ಯೊಂದು ಪರೀಕ್ಷಾ ಕೊಠಡಿಗೂ ಸಿಸಿಟಿವಿ ಆಳವಡಿಸಬೇಕು ಎಂದು ಸೂಚನೆ ನೀಡಿದರು.

ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ ಎಂದ ಅವರು, ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಲ್ಲಿ ಗೋಡೆ ಗಡಿಯಾರವನ್ನು ತಪ್ಪದೇ ಅಳವಡಿಸಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಸೂಕ್ತ ಆರೋಗ್ಯ ತಪಾಸಣಾ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಅವರು ಸೂಚನೆಗಳನ್ನು ನೀಡಿದರು.

ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವಾಗ ಹಾಗೂ ಪರೀಕ್ಷಾ ಕೇಂದ್ರಗಳಿಂದ ಗೌಪ್ಯ ಸಾಮಾಗ್ರಿಗಳನ್ನು ಪಡೆದು ಸಾಗಿಸುವಾಗ ಸಶಸ್ತ್ರ ಭದ್ರತಾ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರ ಬೇಕು. ಈ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಅಭಿರಕ್ಷಿಸಿ ಇಡಬೇಕೆಂದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಪರೀಕ್ಷೆ ಆರಂಭಕ್ಕೂ ಮುನ್ನ ಅರ್ಧ ಗಂಟೆ ಮುಂಚಿತವಾಗಿ ಪ್ರವೇಶ ಪಡೆಯಬೇಕು. ಪ್ರವೇಶ ದ್ವಾರ ಹಾಗೂ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ಅಭ್ಯರ್ಥಿಗಳನ್ನು ತಪಾಸಣೆ ಗೊಳಪಡಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿಡಿಪಿಐ ಗಣಪತಿ ಕೆ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಂಬಂಧಿತ ಇತರರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X