Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ...

ಉಡುಪಿ ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

► ಕೈಗಾರಿಕಾ ಸ್ಪಂದನ ಸಮಿತಿ ಸಭೆ ► ಡಾ.ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Jun 2024 8:52 PM IST
share
ಉಡುಪಿ ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ, ಜೂ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಪ್ಪೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನತಾ ಪ್ರಕ್ರಿಯೆ ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮ ಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕಳೆದ ಮಾರ್ಚ್ ವೇಳೆಗೆ ಜಿಲ್ಲೆಯ 21ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ಪ್ರಗತಿ ಕಂಡು ಬಂದಿಲ್ಲ. ಕೇವಲ ಡಿ ಗ್ರೂಪ್ ಹುದ್ದೆಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲಾ ಹುದ್ದೆಗಳಲ್ಲಿಯೂ ಸ್ಥಳೀಯರ ನೇಮ ಕಾತಿಗೆ ಅವಕಾಶ ಮಾಡಿಕೊಡಬೇಕು. ನೇಮಕಾತಿಗೆ ಸಂಬಂಧಪಟ್ಟ ಸೂಕ್ತ ದಾಖಲೆ ಗಳನ್ನು ನಿರ್ವಹಣೆ ಮಾಡಬೇಕು ಎಂದವರು ಸೂಚನೆ ನೀಡಿದರು.

ಹೊಸದಾಗಿ ಕೈಗಾರಿಕೆ ಸ್ಥಾಪನೆಗೆ ಹಂಚಿಕೆಯಾಗಿರುವ ಜಮೀನನ್ನು ಬಳಕೆ ಮಾಡಿಕೊಳ್ಳುವುದರೊಂದಿಗೆ ಹೊಸ ಕೈಗಾರಿಕೆ ಗಳನ್ನು ನಿರ್ದಿಷ್ಟ ಸಮಯದಲ್ಲಿ ಪ್ರಾರಂಭಿಸಬೇಕು. ಒಂದೊಮ್ಮೆ ಕೈಗಾರಿಕೆಗಳನ್ನು ಪ್ರಾರಂಭಿಸದೇ ಇದ್ದಲ್ಲಿ ಕೆಐಎಡಿಬಿ ಕಾಯ್ದೆ ಅನ್ವಯ ಶೇ.2ರಷ್ಟು ಹೆಚ್ಚುವರಿ ಶುಲ್ಕ ವಸೂಲಿ ಮಾಡಬೇಕು. ಕೈಗಾರಿಕೆ ಚಟುವಟಿಕೆ ಬದಲಾವಣೆ ಮಾಡಿ ನಡೆಸು ತ್ತಿದ್ದಲ್ಲಿ ಅವುಗಳಿಗೆ ಪೂರ್ವಾನುಮತಿ ಪಡೆಯದೆ ಇದ್ದಲ್ಲಿ ನೋಟಿಸ್ ನೀಡಿ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಸರಬರಾಜು ಕೇಂದ್ರಗಳ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆ.ಎಸ್.ಎಸ್.ಐ.ಡಿ.ಸಿಯ ಕೈಗಾರಿಕಾ ವಸಾಹತುನಲ್ಲಿರುವ ಖಾಲಿ ಇರುವ ಮಳಿಗೆ ಹಾಗೂ ನಿವೇಶನಗಳ ಹಂಚಿಕೆ ಮಾಡುವ ಕುರಿತು ಪ್ರಕಟಣೆ ನೀಡಲಾಗಿದ್ದು, ಶೀಘ್ರದಲ್ಲಿಯೇ ಹಂಚಿಕೆ ಮಾಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ತಯಾರಾಗುವ ಉತ್ಪನ್ನಗಳಿಗೆ ವಿದೇಶಿ ರಫ್ತನ್ನು ಹೆಚ್ಚಿಸಲು ಅವುಗಳಿಗೆ ಪ್ರೋತ್ಸಾಹಿಸಬೇಉ. ಇತ್ತೀಚಿಗೆ ಜಿಲ್ಲೆ ಯಲ್ಲಿ ಮೀನಿನ ಉತ್ಪಾದನೆ ಸಹ ಹೆಚ್ಚಿದೆ. ರಫ್ತು ಸಮಿತಿಗಳು ವಿದೇಶಗಳಿಗೆ ಉತ್ಪನ್ನಗಳನ್ನು ರಫ್ತು ಮಾಡಲು ಬೇಕಾದ ಸಲಹೆಗಳನ್ನು ನೀಡಬೇಕು. ಈ ಬಗ್ಗೆ ಮಾಹಿತಿ-ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದ ಅವರು, ಪಂಚಾ ಯತ್ ಅಭಿವೃದ್ಧಿ ಅಧಿಕಾರಿಗಳು ಸಹ ಈ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೆ ಕಟ್ಟಡ ನಿರ್ಮಾಣ ಮಾಡಲು ಸ್ಥಳೀಯ ಪಂಚಾಯತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಆಸ್ತಿ ತೆರಿಗೆಯನ್ನು ಸಹ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಪೌರಾಯುಕ್ತ ರಾಯಪ್ಪ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಕೆ.ಐ.ಎ.ಡಿ.ಬಿಯ ಶ್ರೀನಿವಾಸ ಮೂರ್ತಿ ಹಾಗೂ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X