Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆಗಾಲದ ಸಾಂಕ್ರಾಮಿಕ ರೋಗಗಳ...

ಮಳೆಗಾಲದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2024 9:25 PM IST
share
ಮಳೆಗಾಲದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಜೂ.29: ಮಳೆಗಾಲದ ಪ್ರಾರಂಭದಲ್ಲಿ ಸಾಂಕ್ರಾಮಿಕ ರೋಗ ಗಳು ಸಾಮಾನ್ಯವಾಗಿ ಜನರನ್ನು ಕಾಡುತ್ತವೆ. ಜನರ ಸಹಭಾಗಿತ್ವದೊಂದಿಗೆ ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರೋಗಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತವೆ. ಜನಸಾಮಾನ್ಯರಿಗೆ ರೋಗರು ಜಿನಗಳು ಯಾರ ಮೂಲಕ, ಎಲ್ಲಿಂದ, ಹೇಗೆ ಬರುತ್ತವೆ, ಅವುಗಳ ಬಗ್ಗೆ ಹೇಗೆ ಮುಂಜಾಗೃತೆ ವಹಿಸಬೇಕು, ಸೂಕ್ತ ಚಿಕಿತ್ಸೆ ಪಡೆಯುವುದು ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಆರೋಗ್ಯ ಶಿಕ್ಷಣ ನೀಡಬೇಕು. ಸಾಮಾನ್ಯವಾಗಿ ಹೆಚ್ಚು ರೋಗಗಳು ಸೊಳ್ಳೆಗಳ ಮೂಲಕ ಹರಡುತ್ತವೆ. ಇವುಗಳ ನಿಯಂತ್ರಣದ ಬಗ್ಗೆಯೂ ಪ್ರತಿಯೊಬ್ಬರಿಗೂ ಮಾಹಿತಿ ನೀಡಬೇಕು ಎಂದರು.

ಕಾಲರಾ, ಟೈಫಾಯ್ಡ್, ಅತಿಸಾರ ಬೇಧಿ, ಮಲೇರಿಯಾ, ಡೆಂಗಿ, ಚಿಕನ್ ಗುನ್ಯ, ಕಾಮಾಲೆ ರೋಗ ಸೇರಿದಂತೆ ವಿವಿಧ ರೋಗಗಳಿಗೆ ಮೂಲ ಕಾರಣ ನೀರೇ ಆಗಿರುತ್ತದೆ. ಮಳೆಯ ಕಲುಷಿತ ನೀರು, ಕುಡಿಯುವ ನೀರಿಗೆ ಬೆರೆತಾಗ ಕೆಲವೊಂದು ರೋಗಗಳು ಬಂದರೇ, ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಲೇರಿಯಾ, ಡೆಂಗಿ ಯಂಥ ರೋಗಗಳಿಗೆ ಕಾರಣವಾಗುತ್ತವೆ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ತ್ಯಾಜ್ಯ ವಿಲೇವಾರಿ ಯನ್ನು ವೈಜ್ಞಾನಿಕ ವಾಗಿ ಮಾಡಬೇಕು. ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಅಗತ್ಯವಿರುವ ಔಷಧಿ, ಲಸಿಕೆ, ವ್ಯಾಕ್ಸಿನೇಷನ್ ಮತ್ತು ಕ್ಲೋರಿನೇಷನ್ ಸಾಮಗ್ರಿ ಗಳನ್ನು ದಾಸ್ತಾನು ಇಟ್ಟು ಕೊಳ್ಳಬೇಕು. ಪ್ರವಾಹ ಸಂಭವನೀಯ ಪ್ರದೇಶಗಳ ಪಟ್ಟಿಮಾಡಿ ಆರ್‌ಆರ್‌ಟಿ ತಂಡಗಳನ್ನು ರಚಿಸಿ, ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಚಿಕಿತ್ಸೆ ನೀಡಲು ಸಿದ್ಧರಾಗಿರಬೇಕು. ಹಾಸ್ಟೆಲ್, ಅಂಗನವಾಡಿಗಳಲ್ಲಿ ಜ್ವರ ಸೇರಿದಂತೆ ವಿವಿಧ ರೋಗಗಳು ಬಂದಾಗ ಅವುಗಳ ನಿವಾರಣೆಗೆ ಕ್ರಮ ವಹಿಸಬೇಕು ಎಂದರು.

ತಂಬಾಕು ಉತ್ಪನ್ನಗಳನ್ನು ಶಾಲಾ- ಕಾಲೇಜುಗಳ ಸುತ್ತ 100ಮೀ. ವ್ಯಾಪ್ತಿ ಯಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿ ಮಾರಾಟ ಮಾಡುವುದು ಕಂಡುಬಂದಲ್ಲಿ ಸಂಬಂಧ ಪಟ್ಟ ಅಂಗಡಿಗಳ ಲೈಸೆನ್ಸ್‌ನ್ನು ರದ್ದು ಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ ಅವರು, ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಅನುಮತಿ ಪತ್ರ ಪಡೆಯಬೇಕೆಂಬ ಕಾನೂನು ಜಾರಿಗೆ ಬಂದಿದೆ ಇದನ್ನು ಅನುಷ್ಠಾನ ಗೊಳಿಸಬೇಕು ಎಂದರು.

ಮಾಹಿತಿಗೆ ಒಂದು ಲಕ್ಷ ಬಹುಮಾನ: ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಕ್ಯಾನಿಂಗ್ ಸೆಂಟರ್‌ಗಳು ನಡೆಯುತ್ತಿರುವ ಬಗ್ಗೆ ಹಾಗೂ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಕಂಡುಬಂದ ಬಗ್ಗೆ ಮಾಹಿತಿ ನೀಡಿದಲ್ಲಿ ಅಂಥವರಿಗೆ ಒಂದು ಲಕ್ಷ ರೂ. ಬಹುಮಾನ ನೀಡಲಾಗುವುದು. ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ 84 ಸ್ವಾಭಾವಿಕ ಗರ್ಭಪಾತ ವಾಗಿವೆ. ಕಾನೂನು ಬಾಹಿರವಾಗಿ ವೈದ್ಯರ ಸಲಹೆಗಳಿಲ್ಲದೇ ಭ್ರೂಣ ಪತ್ತೆಗಳು ನಡೆಯುತ್ತಿರುವ ಬಗ್ಗೆ ಎಚ್ಚರವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 7536 ನಾಯಿಕಡಿತ ಪ್ರಕರಣಗಳು, 151 ಹಾವು ಕಡಿತ ಪ್ರಕರಣಗಳಾಗಿವೆ. ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮಣಿಪಾಲ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ಷಯ ಮುಕ್ತ ಭಾರತ ಅಭಿಯಾನ ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯರೋಗಿಗಳನ್ನು ದತ್ತು ಪಡೆಯಲು ದಾನಿಗಳನ್ನು ಪ್ರೋತ್ಸಾಹಿಸಬೇಕು. ಕ್ಷಯರೋಗಿಗಳಿಗೆ ಚಿಕಿತ್ಸೆ ಹಾಗೂ ಪೌಷ್ಠಿಕ ಆಹಾರವನ್ನು ಒದಗಿಸಿ ಕ್ಷಯರೋಗ ಹಾಗೂ ರೋಗಿ ಗಳನ್ನು ಗುಣಮುಖ ರನ್ನಾಗಿಸಿ ಕ್ಷಯ ಮುಕ್ತ ಗ್ರಾಮವನ್ನಾಗಿಸಬೇಕು ಎಂದರು.

1500 ಯುನಿಟ್ ರಕ್ತ ಸಂಗ್ರಹದ ಗುರಿ: ಜಿಲ್ಲೆಯಲ್ಲಿ 1500 ಯೂನಿಟ್ ರಕ್ತ ಸಂಗ್ರಹ ಮಾಡಬೇಕಾದ ಗುರಿ ಹೊಂದಲಾ ಗಿದೆ. ಆದರೆ, ಈವರೆಗೆ 29,107 ಯೂನಿಟ್‌ಗಳಷ್ಟು ರಕ್ತ ಸಂಗ್ರಹವಾಗಿರುತ್ತದೆ. ರಕ್ತನಿಧಿ ಕೇಂದ್ರ ಗಳನ್ನು ಸ್ಥಾಪಿಸಲು ಮುಂದಾದಲ್ಲಿ ಅವುಗಳಿಗೆ ನಿಯಮಾನುಸಾರ ಅನುಮತಿ ನೀಡಬೇಕೆಂದು ಸೂಚನೆ ನೀಡಿದರು.

ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಂಪೌಂಡ್, ಉದ್ಯಾನವನವನ್ನು ನರೇಗಾದಡಿ ಕೈಗೊಳ್ಳಲು ಹಾಗೂ ಕಟ್ಟಡವನ್ನು ಇತರೆ ಅನುದಾನದಲ್ಲಿ ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 3 ತಾಯಿ ಮರಣ ಪ್ರಕರಣ

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 3 ತಾಯಿ ಮರಣ ಪ್ರಕರಣಗಳಾಗಿವೆ. ಅವುಗಳಲ್ಲಿ 2 ಹೊರಜಿಲ್ಲೆಗಳ ಪ್ರಕರಣಗಳಿವೆ. ಬಾಣಂತಿಯರಿಗೆ ಪ್ರಾರಂಭ ದಿಂದಲೇ ತಾಯಿ ಕಾರ್ಡ್‌ಗಳನ್ನು ವಿತರಿಸಿ, ನಿರಂತರ ಆರೋಗ್ಯ ತಪಾಸಣೆ ಮಾಡಬೇಕು. ಹೆರಿಗೆ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದರೊಂದಿಗೆ ಯಾವುದೇ ರೀತಿಯಲ್ಲೂ ತಾಯಿ ಮರಣ ಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಒಂದೊಮ್ಮೆ ಮರಣ ಪ್ರಕರಣ ಆದಲ್ಲಿ, ಅದರ ಮರುದಿನವೇ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದರು.

ಎಂಡೋಸಲ್ಫಾನ್ ಬಾಧಿತರಿಗೆ ಪುನರ್ವಸತಿ ಕೇಂದ್ರ

ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುದಾರಣೆ ಹಾಗೂ ಪುನರ್ವಸತಿ ಕಾರ್ಯಕ್ರಮಗಳನ್ನು ನಿರಂತರ ವಾಗಿ ಕೈಗೊಳ್ಳಬೇಕು. ಅವರಿಗೆ ಮಾಸಾಶನಗಳು ನಿಗದಿತ ಅವಧಿಯಲ್ಲಿ ಪಾವತಿ ಆಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕು.

ಬೈಂದೂರಿನ ನಾಡ ಗ್ರಾಮ ಪಂಚಾಯತ್‌ನ ಸೇನಾಪುರ ಗ್ರಾಮದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನಿರ್ಮಾಣಕ್ಕಾಗಿ ಕ್ರಮವಹಿಸಬೇಕು. ಪ್ರಸ್ತುತ ತಾತ್ಕಾಲಿಕವಾಗಿ ಹತ್ತಿರದಲ್ಲಿ ಲಭ್ಯವಿರುವ ಶಾಲಾ ಕಟ್ಟಡದಲ್ಲಿ ಅದನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಎಂಡೋ ಬಾಧಿತರಿರುವ ಪ್ರದೇಶಗಳ ಸಾರ್ವಜನಿಕ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಫಿ ಘಟಕಗಳನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ನುಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X