ಅಗ್ನಿಪಥ್ ಪರೀಕ್ಷೆಗೆ ನೋಂದಣಿ

ಉಡುಪಿ, ಜೂ.29: ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್‌ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅರ್ಜಿದಾರರು ಜುಲೈ 8ರಿಂದ ಜುಲೈ 28ರವರೆಗೆ ವೆಬ್‌ಸೈಟ್ - http://agnipathvayu.cdac.in-ಮೂಲಕ ನೋಂದಣಿ ಮಾಡಿಕೊಳ್ಳಲು ಅವಿವಾಹಿತ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 2004ರ ಜುಲೈ 3ರಿಂದ 2008ರ ಜನವರಿ 3ರ ನಡುವೆ ಜನಿಸಿರಬೇಕು. ಪಿಯುಸಿಯಲ್ಲಿ ಕಲಾ, ಕಲೆ, ವಾಣಿಜ್ಯ, ವಿಜ್ಞಾನ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ. 50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ - https://careerindianairforce.cdac.in-ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.





