ಕಿರಿಯ ಆರೋಗ್ಯ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಇಲಾಖೆಯ ಪಿಎಂ- ಎಬಿಹೆಚ್‌ಐಎಂ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಆರು ನಮ್ಮ ಕ್ಲಿನಿಕ್‌ಗಳಿಗೆ ಹೊಸದಾಗಿ ಅನುಮೋದನೆಯಾಗಿರುವ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ - udupi.nic.in-ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘದ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
Next Story





