ಪಿ.ಎಂ. ಸ್ವ-ನಿಧಿ ಯೋಜನೆ: ಅರ್ಜಿ ಅಹ್ವಾನ

ಉಡುಪಿ : ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು, ನಗರ ಪ್ರದೇಶದಲ್ಲಿ ೨೦೨೦ರ ಮಾರ್ಚ್ ೨೪ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನ ಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ/ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.೧೦,೦೦೦, ರೂ.೨೦,೦೦೦ ಮತ್ತು ರೂ.೫೦,೦೦೦ ಸಾಲ ಸೌಲಭ್ಯವನ್ನು ಶೇ.೭ ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿ ಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





