ಮರವಂತೆ ಬೀಚ್ ಪಾರ್ಕಿಂಗ್ ಸೌಲಭ್ಯ ಪರಿಶೀಲನೆ ಭರವಸೆ: ಅಗತ್ಯ ದುರಸ್ತಿ ಕಾಮಗಾರಿಗೆ ಪ್ರವಾಸೋದ್ಯಮ ಸಚಿವರ ಸ್ಪಂದನೆ

ಬೈಂದೂರು: ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಬೀಚ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ವಿಧಾನಸಭೆಯಲ್ಲಿ ಉತ್ತರಿಸಿದರು.
ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಮರವಂತೆ ಬೀಚ್‌ನಲ್ಲಿ ಸೂಕ್ತವಾದ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ತ್ರಾಸಿ ಮರವಂತೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಮೀನಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹಾಗೂ ಆಹಾರ ಮಳಿಗೆಗಳ ದುರಸ್ಥಿ ಕಾಮಗಾರಿ ಕೈಗೊಳ್ಳಲು ೩೯.೫೦ ಲಕ್ಷದ ಅಂದಾಜು ಪಟ್ಟಿ ಯನ್ನು ಸಲ್ಲಿಸಿದ್ದಾರೆ ಎಂದರು.
೨೦೨೩-೨೪ನೇ ಸಾಲಿನಲ್ಲಿ ಅನುದಾನದ ಕೊರತೆಯಿಂದ ಈ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಲಾಖೆಗೆ ಆಯವ್ಯಯ ದಲ್ಲಿ ಒದಗಿಸುವ ಅನುದಾನದ ಲಭ್ಯತೆಗನುಗುಣವಾಗಿ ಈ ಬಾರಿ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ಉತ್ತರಿಸಿದರು.





