Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಲ್ಲ ಧರ್ಮ ಗ್ರಂಥಗಳನ್ನು ಓದುದರಿಂದ...

ಎಲ್ಲ ಧರ್ಮ ಗ್ರಂಥಗಳನ್ನು ಓದುದರಿಂದ ಪ್ರೀತಿ ಬೆಳೆಯಲು ಸಾಧ್ಯ: ವಂ.ಡೆನಿಸ್ ಡೆಸಾ

ವಾರ್ತಾಭಾರತಿವಾರ್ತಾಭಾರತಿ28 Sept 2024 7:42 PM IST
share
ಎಲ್ಲ ಧರ್ಮ ಗ್ರಂಥಗಳನ್ನು ಓದುದರಿಂದ ಪ್ರೀತಿ ಬೆಳೆಯಲು ಸಾಧ್ಯ: ವಂ.ಡೆನಿಸ್ ಡೆಸಾ

ಮಲ್ಪೆ: ಇನ್ನೊಂದು ಧರ್ಮದ ಧರ್ಮಗ್ರಂಥಗಳನ್ನು ಓದಿಕೊಂಡು ಅವರ ಆಚಾರ ವಿಚಾರಗಳು ಮತ್ತು ಭೋಧನೆಗಳನ್ನು ತಿಳಿದುಕೊಂಡಾಗ ಅದರ ಜನರ ಬಗ್ಗೆ ಗೌರವ ಪ್ರೀತಿ ಮತ್ತು ವಿಶ್ವಾಸ ಹುಟ್ಟುತ್ತದೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಹೇಳಿದ್ದಾರೆ.

ಜಮಾತೆ-ಇಸ್ಲಾಮಿ-ಹಿಂದ್ ಮಲ್ಪೆ ಘಟಕದ ನೇತೃತ್ವದಲ್ಲಿ ಪ್ರವಾದಿ ಸಂದೇಶ ಅಭಿಯಾನದ ಪ್ರಯುಕ್ತ ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಜಗತ್ತಿನ ಎಲ್ಲಾ ಧರ್ಮಗಳು ಮಾನವೀಯತೆ, ಸಾಮರಸ್ಯದ ಬದುಕಿನ ಬೋಧನೆ ಮಾಡುತ್ತವೆ. ಪ್ರವಾದಿ ಮಹಮ್ಮದ್ ಪೈಗಂಬರ್ ಭೋಧಿಸಿದ ದಯೆ, ಕ್ಷಮೆ, ನ್ಯಾಯ ಹಾಗೂ ಸಮಾನತೆ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ. ಮಾನವ ದ್ವೀಪದಲ್ಲಿ ಬದುಕುತ್ತಿಲ್ಲ ಬದಲಾಗಿ ಒಂದು ಸಮುದಾಯದಲ್ಲಿ ಬದುಕುತ್ತಿದ್ದೇವೆ. ಆದುದರಿಂದ ನನಗೆ ಸಮುದಾಯದ ಅಗತ್ಯವಿದೆ ಎಂದರು.

ನಾವು ಪ್ರತಿಯೊಬ್ಬರು ಗೋಡೆಯಲ್ಲಿರುವ ಒಂದು ಇಟ್ಟಿಗೆಯ ಹಾಗೆ. ಒಂದೊಂದು ಇಟ್ಟಿಗೆಯ ಜೋಡಣೆಯಿಂದ ಒಂದು ಗೋಡೆ ನಿಲ್ಲುತ್ತದೆ. ಜೊತೆಯಾಗಿ ನಿಂತರೆ ಯಾವ ಪಂಥಾಹ್ವಾನಗಳನ್ನು ಗೆಲ್ಲಬಹುದು. ಸಮಾಜದಲ್ಲಿ ಇಂದು ಸತ್ಯ, ವಿಶ್ವಾಸ ಮತ್ತು ಸಹಿಷ್ಣುತೆ ಮಾಯವಾಗಿದ್ದು ಅದನ್ನು ಉಳಿಸುವತ್ತ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ತೊಟ್ಟಂ ಸಮನ್ವಯ ಸರ್ವ ಧರ್ಮ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ ಮಾತನಾಡಿ, ಕೂಡಿ ಬಾಳುವುದು ನಮ್ಮ ಪೂರ್ವಜರು ನಮಗೆ ಹಾಕಿಕೊಟ್ಟ ಸಂಸ್ಕೃತಿಯಾಗಿದೆ. ಇಂದು ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಪರಸ್ಪರ ಅಪನಂಬಿಕೆಗಳು ಹುಟ್ಟಿವೆ. ಇದರಿಂದ ಸಮಾಜದಲ್ಲಿ ಕಲುಷಿತ ವಾತಾವರಣ ತುಂಬಿದ್ದು ಸರ್ವಧರ್ಮಿಯರು ಒಟ್ಟಾಗಿ ಸೇರಿದಾಗ ಸಹಬಾಳ್ವೆಯ ಸಂದೇಶ ಸಾರಿದಂತಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಅಧ್ಯಕ್ಷ ಇಸಾಕ್ ಪುತ್ತೂರು ಮಾತನಾಡಿ, ಪ್ರತಿಯೊಂದು ಧರ್ಮಗ್ರಂಥಗಳು ಇನ್ನೊಬ್ಬರಿಗೆ ನೋವಾಗದಂತೆ ವರ್ತಿಸುವ ಸಂದೇಶವನ್ನು ಸಾರಿದ್ದು ಅದರಂತೆ ಸಮಾಜದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಪರಸ್ಪರ ಸ್ನೇಹ ಸಂಬಂಧಗಳನ್ನು ಗಟ್ಟಿಗೊಳಿಸುವ ಕೆಲಸಗಳು ನಡೆಯಬೇಕು ಎಂದು ತಿಳಿಸಿದರು.

ಸಮನ್ವಯ ಸರ್ವಧರ್ಮ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ, ಮಲ್ಪೆ ಸಿಎಸ್‌ಐ ಚರ್ಚಿನ ಪಾಸ್ಟರ್ ವಂ.ಎಡ್ವಿನ್ ಸೋನ್ಸ್, ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷರಾದ ಗಣೇಶ್ ನೆರ್ಗಿ ಉಪಸ್ಥಿತರಿದ್ದರು.

ಮಲ್ಪೆ ಅಬುಬಕ್ಕರ್ ಜಾಮೀಯಾ ಮಸೀದಿ ಇಮಾಮ್ ಮೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ಪ್ರಾಸ್ತಾವಿಕ ನುಡಿಗ ಳೊಂದಿಗೆ ಸ್ವಾಗತಿಸಿದರು. ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆ ಅಧ್ಯಕ್ಷ ಬಿ.ಸಿರಾಜ್ ಅಹ್ಮದ್ ವಂದಿಸಿದರು. ಜಿ.ಶುಐಬ್ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X