ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ಸೆ.29: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ರವಿವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟಿಸಿದರು.
ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಶುಭ ಹಾರೈಸಿದರು. ಮಣಿಪಾಲ ಮಾಹೆಯ ಉಪ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಪ್ರತಿ ವರ್ಷ ನೀಡುತ್ತಿರುವ 25000ರೂ. ನೆರವನ್ನು ಬೈಂದೂರು ಸರಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಧಿಕ ಅಂಕಗಳಿಸಿದ ನಾಲ್ವರು ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು.
ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ, ಕೃಷ್ಣಪ್ರಸಾದ್ ಅಡ್ಯಂತಾಯ, ಡಾ.ಜಿ.ಎಸ್.ಚಂದ್ರಶೇಖರ, ಕೆ.ರಘುಪತಿ ಭಟ್, ಯು. ವಿಶ್ವನಾಥ ಶೆಣೈ, ಎಚ್.ನಾಗರಾಜ ಶೆಟ್ಟಿ, ಕೆ.ಅಶೋಕ್ ನಾಯಕ್, ಪಿ.ಸದಾನಂದ ಶೆಣೈ, ಕೆ.ಸದಾಶಿವ ಭಟ್, ವಿಲಾಸಿನಿ ಬಾಬುರಾಯ ಶೆಣೈ, ಯು.ಎಸ್. ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಚ್.ಎಸ್.ಶೆಟ್ಟಿ, ಡಾ.ಜೆ.ಎನ್.ಭಟ್, ಡಾ.ಬಿ.ಭಾಸ್ಕರ ರಾವ್, ವಿ.ಗುಂಡಿಬೈಲ್ ಸುಬ್ರಹ್ಮಣ್ಯ ಭಟ್, ಹರಿಪ್ರಸಾದ್ ಭಟ್, ಡಾ.ರಂಜಿತ್ ಕುಮಾರ್ ತಮ್ಮ ಅನುಭವಗಳನ್ನು ಹಂಚಿಕೊಂಡರು. ಯು.ಉಪೇಂದ್ರ ಅವರ ನೆನಪಿನಲ್ಲಿ ಉತ್ತಮ ಕಡತ ನಿರ್ವಹಣೆಗೆ ನೀಡುವ ಹಾಗೂ ಅಕ್ಷತಾ ದೇವಾಡಿಗ ಸ್ಮರಣಾರ್ಥ ಉತ್ತಮ ಪತ್ರ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.
ಕಲಾರಂಗದ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಸ್ವಾಗತಿಸಿದರು. ಅಶೋಕ್ ಎಂ. ವಂದಿಸಿದರು. ಜೊತೆ ಕಾರ್ಯದರ್ಶಿ ನಾರಾಯಣ ಎಂ.ಹೆಗಡೆ ಕಾರ್ಯಕ್ರಮ ನಿರೂಪಿಸಿದರು.







