ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾರ್ಕಳ, ಅ.1: ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಕಳ ಪತ್ತೋಂಜಿಕಟ್ಟೆ ನಿವಾಸಿ ಸರೋಜಿನಿ(73) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.30ರಂದು ಬೆಳಗ್ಗೆ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ ಗ್ರಾಮಾಂತರ: ಕಣ್ಣಿನ ದೃಷ್ಠಿಯ ಸಮಸ್ಯೆಯಿಂದ ಬಳಲುತ್ತಿದ್ದ ಮುಂಡ್ಕೂರು ಗ್ರಾಮದ ಉಮೇಶ್(55) ಎಂಬವರು ಮನನೊಂದು ಸೆ.30 ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story