Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಾರಕೂರು: ವಿಜಯನಗರ ತುಳುವ ಮನೆತನದ...

ಬಾರಕೂರು: ವಿಜಯನಗರ ತುಳುವ ಮನೆತನದ ಶಾಸನಗಳ ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ16 Oct 2024 8:09 PM IST
share
ಬಾರಕೂರು: ವಿಜಯನಗರ ತುಳುವ ಮನೆತನದ ಶಾಸನಗಳ ಅಧ್ಯಯನ

ಬ್ರಹ್ಮಾವರ, ಅ.16: ಬಾರಕೂರಿನ ಭಂಡಾರಕೇರಿ ಮಠದಲ್ಲಿರುವ ವಿಜಯ ನಗರ-ತುಳುವ ಮನೆತನಕ್ಕೆ ಸೇರಿದ ಎರಡು ಶಾಸನಗಳ ಅಧ್ಯಯನವನ್ನು ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಸ್ವಾಮೀಜಿಗಳ ಅನುಮತಿಯ ಮೇರೆಗೆ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ-ಕುಕ್ಕೆ ಸುಬ್ರಹ್ಮಣ್ಯ ಇಲ್ಲಿನ ಸ್ಥಾಪಕ ನಿರ್ದೇಶಕ ಡಾ.ಜಿ.ವಿ. ಕಲ್ಲಾಪುರ ಮತ್ತು ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮಾಡಿದ್ದಾರೆ.

ಈ ಎರಡೂ ಶಾಸನಗಳ ಉಲ್ಲೇಖಗಳು ಎಲ್ಲಿಯೂ ಲಭ್ಯವಾಗದಿರುವುದ ರಿಂದ ಶಾಸನ ಅಧ್ಯಯನವನ್ನು ಕೈಗೊಳ್ಳ ಲಾಗಿದೆ. ಪ್ರಸ್ತುತ ಎರಡೂ ಶಾಸನಗಳು ತೃಟಿತಗೊಂಡಿದ್ದು, ಗ್ರಾನೈಟ್ ಶಿಲೆಯಲ್ಲಿ ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಕೊರೆಯಲ್ಪಟ್ಟಿದೆ.

ವಿಜಯನಗರ ತುಳುವ ದೊರೆ ಕೃಷ್ಣದೇವರಾಯನ ಕಾಲಕ್ಕೆ(ಸಾ.ಶ.ವ 1509-29) ಸೇರುವ ಜೈನ ಶಾಸನವು, ಬಾರ ಕೂರಿನ ರಾಜ್ಯಪಾಲನಾಗಿದ್ದ ವಿಜೆಯಪ್ಪಒಡೆಯ್ನನ್ನು (ಸಾ.ಶ.ವ 1519-20) ಉಲ್ಲೇಖಿಸುತ್ತದೆ. ಪ್ರಸ್ತುತ 11 ಸಾಲುಗಳನ್ನು ಮಾತ್ರ ಹೊಂದಿರುವ ಈ ಶಾಸನದಲ್ಲಿ ಚಂದ್ರಗ್ರಹಣದ ಸಂದರ್ಭದಲ್ಲಿ ಮಾಡಿದ ದಾನದ ಕುರಿತಾಗಿ ತಿಳಿಸುತ್ತದೆ. ರಘುವರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಗೋಪಿನಾಥ ದೇವರ ಉಲ್ಲೇಖದ ಜೊತೆಗೆ ಕೊಟ್ಟಿರುವ ದಾನಕ್ಕೆ ಸಾಕ್ಷಿಯಾಗಿ ಹೊಸ ವಳಲ (ಪ್ರಸ್ತುತ ಹೊಸಾಳ) ಜಂನಿಗಳ ಮತ್ತು ವಿಜೆಯಪ್ಪಒಡೆಯರ ಒಪ್ಪ ಎಂದು ಹೇಳಿದೆ. ಶಾಪಾಶಯ ವಾಕ್ಯದೊಂದಿಗೆ ಶ್ರೀವಿತರಾಗ ಎಂಬ ಜಿನ ಒಕ್ಕಣೆಯೊಂದಿಗೆ ಶಾಸನ ಮುಕ್ತಾಯಗೊಂಡಿರುತ್ತದೆ.

ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರರ ಉಬ್ಬು ಕೆತ್ತನೆಯನ್ನು ಬಿಟ್ಟರೆ ಉಳಿದ ಕೆತ್ತನೆಗಳು ಸಂಪೂರ್ಣವಾಗಿ ನಶಿಸಿ ಹೋಗಿದೆ. ಗಣಪತಿ ಸ್ತುತಿ ಯೊಂದಿಗೆ ಪ್ರಾರಂಭವಾಗುವ ಈ ಶಾಸನದಲ್ಲಿ ಪ್ರಸ್ತುತ 18 ಸಾಲುಗಳು ಮಾತ್ರವಿದ್ದು, ಉಳಿದ ಭಾಗವು ನಶಿಸಿ ಹೋಗಿರುತ್ತದೆ. ಶಕವರುಷ 1460 (ಸಾ.ಶ.ವ 1539)ರ ವಿಕಾರಿ ಸಂವತ್ಸರದ ಮಾಘ ಶುದ್ಧ 15ರ ಕಾಲಮಾನವನ್ನು ಒಳಗೊಂಡಂತೆ ಬಾರಕೂರ ರಾಜ್ಯವನ್ನು ವಿಜಯನಗರ ತುಳುವ ದೊರೆ ಅಚ್ಯುತರಾಯನ(ಸಾ.ಶ.ವ 1529-42) ಆಜ್ಞೆಯಂತೆ ಸಾಂಕಣ ನಾಯಕನ ನಿರೂಪದಿಂದ ಕೊಂಡಮರಸ ಒಡೆಯನು ಆಳ್ವಿಕೆ ಮಾಡುತ್ತಿದ್ದ ಎಂಬುದು ತಿಳಿಯುತ್ತದೆ

ಅಚ್ಯುತರಾಯನ ಈ ಶಾಸನದಿಂದ ಮಹತ್ವದ ವಿಚಾರವೊಂದು ಬೆಳಕಿಗೆ ಬರುತ್ತದೆ. ಕೊಂಡಮರಸ ಒಡೆಯನ ಆಳ್ವಿಕೆಯ ಕಾಲವು 3 ವರ್ಷಗಳ ಕಾಲ ವಿಸ್ತಾರವಾಗಿರುವುದು. ಅಂದರೆ ಪ್ರಾರಂಭದ ದಿನಗಳಲ್ಲಿ ಈತನ ಕಾಲವನ್ನು ಸಾ.ಶ.ವ 1533-36 ಎಂದು ತಿಳಿಯಲಾಗಿತ್ತು. ಆದರೆ ಅಧ್ಯಯನ ಶಾಸನದ ಕಾಲಮಾನವು ಸಾ.ಶ.ವ 1539ಕ್ಕೆ ಸೇರುವುದರಿಂದ ಕೊಂಡಮರಸ 1539ರವರೆಗೆ ಅಥವಾ 1539ರಲ್ಲಿಯೂ ಆಳ್ವಿಕೆ ಮಾಡಿರುವುದು ಕಂಡುಬರುತ್ತದೆ. ಹಾಗಾಗಿ ಅಧ್ಯಯನ ಕ್ಕೊಳಗಾದ ಶಾಸನಗಳು ತುಳುನಾಡಿನ ಇತಿಹಾಸ ಅಧ್ಯಯನಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿವೆ ಎಂದು ಹೇಳಬಹುದು.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ ಉಡುಪಿ ಇದರ ಅಧ್ಯಯನ ನಿರ್ದೇಶಕ ಪ್ರೊ. ಎಸ್.ಎ.ಕೃಷ್ಣಯ್ಯ ಹಾಗೂ ಮಠದ ಸಿಬ್ಬಂದಿ ಕುಶಾಲ ದೇವಾಡಿಗ, ಪುರಾತತ್ತ್ವ ಸಂಶೋಧನಾರ್ಥಿಗಳಾದ ಮಂಜುನಾಥ ನಂದಳಿಕೆ, ಶ್ರಾವ್ಯಾ ಆರ್. ಮತ್ತು ಯಶಸ್ವಿನಿ ಆಚಾರ್ಯ ಸಹಕಾರ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X