Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ರಾ.ಹೆದ್ದಾರಿ ಬ್ಲ್ಯಾಕ್‌...

ಉಡುಪಿ ಜಿಲ್ಲೆಯ ರಾ.ಹೆದ್ದಾರಿ ಬ್ಲ್ಯಾಕ್‌ ಸ್ಪಾಟ್‌ಗಳನ್ನು ಅಪಘಾತ ಮುಕ್ತ ವಲಯವನ್ನಾಗಿ ಮಾಡಿ: ಡಿಸಿ ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Oct 2024 8:32 PM IST
share
ಉಡುಪಿ ಜಿಲ್ಲೆಯ ರಾ.ಹೆದ್ದಾರಿ ಬ್ಲ್ಯಾಕ್‌ ಸ್ಪಾಟ್‌ಗಳನ್ನು ಅಪಘಾತ ಮುಕ್ತ ವಲಯವನ್ನಾಗಿ ಮಾಡಿ: ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಅ.28: ಜಿಲ್ಲೆಯಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳಾಗುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಿದ್ದು, ಅವುಗಳನ್ನು ವಿವಿಧ ಕ್ರಮಗಳ ಮೂಲಕ ಅಪಘಾತ ಮುಕ್ತ ವಲಯವನ್ನಾಗಿ ಮಾಡುವ ಕಾರ್ಯವನ್ನು ಶೀಘ್ರವೇ ಕೈ ಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ 2020ರಿಂದ 2022ರವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾಗುವ ಸ್ಥಳಗಳನ್ನು 20 ಬ್ಲ್ಯಾಕ್‌ ಸ್ಪಾಟ್‌ಗಳಾಗಿ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷತಾ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕ ಗಳ ಅಳವಡಿಕೆ, ಹೈಮಾಸ್ಟ್ ದೀಪಗಳ ಅಳವಡಿಕೆ, ಬ್ಲಿಂಕರ್ಸ್‌ಗಳು, ರಸ್ತೆ ಬದಿ ಯಲ್ಲಿ ಮೆಟಲ್‌ಕ್ರಾಸ್ ಬ್ಯಾರಿಯರ್ಸ್‌, ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫುಟ್‌ಓವರ್ ಬ್ರಿಡ್ಜ್ ನಿರ್ಮಾಣ, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚ ರಂಡಿ, ಎಂ.ಎಸ್ ರೈಲಿಂಗ್ಸ್‌ನಂಥ ಕಾಮಗಾರಿಗಳನ್ನು ನಡೆಸಬೇಕಾದ ಅಗತ್ಯತೆ ಇದ್ದು, ಇವುಗಳನ್ನು ಆದ್ಯತೆಯ ಮೇಲೆ ಶೀಘ್ರವೇ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ, ಅಪಘಾತದ ತಡೆಗೆ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅವುಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ವಾಹನ ಚಾಲಕರು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದ್ದಲ್ಲಿ ಹಾಗೂ ವೇಗಮಿತಿಯೊಳಗೆ ವಾಹನ ಸಂಚರಿಸಿದ್ದಲ್ಲಿ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆಯೊಂದಿಗೆ ಸಹಕಾರ ನೀಡಬೇಕು ಎಂದರು.

ಪೂರಕ ರಸ್ತೆ ನಿರ್ಮಿಸಿ: ರಸ್ತೆಗಳಿಗೆ ಹಂಪ್ಸ್‌ಗಳನ್ನು ಅಳವಡಿಸುವಾಗ ವೈಜ್ಞಾನಿಕ ಮೆಜರ್ಸ್‌ಗಳನ್ನು ತೆಗೆದುಕೊಳ್ಳಬೇಕು ಎಂದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಜನರ ಹಾಗೂ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ತಾತ್ಕಾಲಿಕವಾಗಿ ಪೂರಕ ರಸ್ತೆ ಕಾಮಗಾರಿ ಗಳನ್ನು ಕೈಗೊಳ್ಳಬೇಕು ಎಂದರು.

ಕುಂದಾಪುರ ಘಟಕದಿಂದ ಹೊರಡುವ ಗ್ರಾಮೀಣ ಸಾರಿಗೆ ಕೆಎಸ್ಸಾರ್ಟಿಸಿ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಬಾರದು. ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಇಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಅಗತ್ಯವಿರುವ ಸುರಕ್ಷತಾ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಡಿ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಸುರಕ್ಷತಾ ಕ್ರಮ ಗಳನ್ನು ಕೈಗೊಳ್ಳಬೇಕು ಎಂದು ಡಿಸಿ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮತ್ತಿತರರು ಉಪಸ್ಥಿತರಿದ್ದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X