ವಿದ್ಯಾರ್ಥಿನಿ ನಾಪತ್ತೆ

ಉಡುಪಿ, ಅ.28: ಬಾಗಲಕೋಟೆ ಮೂಲದ ಪ್ರಸ್ತುತ ಕಟಪಾಡಿಯಲ್ಲಿ ವಾಸವಿರುವ ಶಶಿಕಲಾ (19) ಎಂಬ ವಿದ್ಯಾರ್ಥಿನಿ ಅ.24ರಂದು ಮನೆ ಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಬಿಳೀ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ. ಸಂಖ್ಯೆ:0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಜಿಲ್ಲಾ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820- 2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820- 2526444 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





