ಪುನೀತ್ ರಾಜಕುಮಾರ್‌ಗೆ ಪುಷ್ಪನಮನ
ಉಡುಪಿ, ಅ.30: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಪ್ಪುಅಭಿಮಾನಿಗಳ ಬಳಗ ಉಡುಪಿ ಜಿಲ್ಲೆ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರ ಣೆಯ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ ಅಪ್ಪುಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಅಪ್ಪುಅಭಿಮಾನಿಗಳ ಬಳಗದಿಂದ ಗಿರೀಶ್ ಕಡ್ಡಿಪುಡಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮಾತನಾಡಿದರು.
ಅಪ್ಪು ಅಭಿಮಾನಿ ಬಳಗದ ಪ್ರೀತಂ ಬಿ.ಎಸ್., ಗುರುರಾಜ್ ಗಂಗಾಣಿ, ಮನು, ಗಗನ್ ವೀರೇಶ್, ರಕ್ಷಿತ್ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಮಹೇಶ್ ಗುಂಡಿಬೈಲು, ಸದಸ್ಯರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
Next Story