Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ನಮ್ಮ ಬದುಕಿನ ದಾರಿದೀಪ: ಡಾ....

ಸಂವಿಧಾನ ನಮ್ಮ ಬದುಕಿನ ದಾರಿದೀಪ: ಡಾ. ನಯನಾ

ವಾರ್ತಾಭಾರತಿವಾರ್ತಾಭಾರತಿ26 Nov 2024 8:11 PM IST
share
ಸಂವಿಧಾನ ನಮ್ಮ ಬದುಕಿನ ದಾರಿದೀಪ: ಡಾ. ನಯನಾ

ಭಟ್ಕಳ: "ಭಾರತೀಯ ಸಂವಿಧಾನವು ಎಲ್ಲರಿಗೂ ದಾರಿದೀಪವಾಗಿದೆ" ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ ಹೇಳಿದರು. ಅವರು ಮಂಗಳವಾರ ಸಂಜೆ ನಗರದ ಶಮ್ಸುದ್ದೀನ್ ವೃತ್ತದಲ್ಲಿ ಸದ್ಭಾವನಾ ಮಂಚ್ ಆಯೋಜಿಸಿದ್ದ "ಸಂವಿಧಾನ ಪೀಠಿಕೆ ಓದು" ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

"ನ. 26, 1949ರಲ್ಲಿ ಅಳವಡಿಸಿಕೊಂಡ ಈ ಸಂವಿಧಾನದ ಆದರ್ಶಗಳಿಗೆ ಅನುಗುಣವಾಗಿ ಜೀವನ ರೂಪಿಸಿಕೊಳ್ಳಲು ನಾವು ಪ್ರಾಮಾಣಿಕ ಪ್ರಯತ್ನ ಮಾಡಬೇಕು" ಎಂದು ಅವರು ಕರೆ ನೀಡಿದರು.

ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ ಮಾತನಾಡಿ, "ನಮ್ಮ ಸಂವಿಧಾನದ ರಚನೆಗೆ ದೊಡ್ಡ ಪರಿಶ್ರಮ ವಿದೆ. ಜಾತಿ, ಮತ, ಆಚಾರ-ವಿಚಾರಗಳನ್ನು ಮೀರಿ ಸಾಮಾಜಿಕ ನ್ಯಾಯ, ಸಮಾನತೆ, ಮತ್ತು ಬಾಂಧವ್ಯವನ್ನು ಪ್ರತಿಪಾ ದಿಸುವ ಸಂವಿಧಾನ ನಮ್ಮ ಗೌರವವಾಗಿದೆ. ಆದರೆ ದ್ವೇಷದ ರಾಜಕಾರಣದಿಂದಾಗಿ ಸಂವಿಧಾನವನ್ನು ಕೀಳಾಗಿ ಕಾಣುವ ಮನೋಭಾವ ಬೆಳೆಸುತ್ತಿರುವುದು ವಿಷಾದನೀಯ. ಈ ರೀತಿ ಕರ್ತವ್ಯನಿಷ್ಠೆಯನ್ನು ಕಳೆದುಕೊಳ್ಳುವವರಿಂದ ಸಂವಿಧಾನದ ಶ್ರೇಷ್ಠತೆಯನ್ನು ಹಾಳು ಮಾಡಲು ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟರು.

ಅಂಜುಮನ್ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಆರ್.ಎಸ್. ನಾಯ್ಕ, "ಸಂವಿಧಾನವು ನಮ್ಮ ಹಕ್ಕುಗಳನ್ನು ಕಾಪಾಡುತ್ತದೆ ಮತ್ತು ಇತರರ ಹಕ್ಕುಗಳನ್ನು ಗೌರವಿಸಲು ಕಲಿಸುತ್ತದೆ. ಗೌರವಯುತ ಜೀವನಕ್ಕಾಗಿ ಮಾರ್ಗ ದರ್ಶಕವಾಗಿ ಕಾರ್ಯನಿರ್ವಹಿಸುವ ಈ ಸಂವಿಧಾನವನ್ನು ಪ್ರತಿಯೊಬ್ಬರೂ ಗಂಭೀರವಾಗಿ ಅಧ್ಯಯನ ಮಾಡಬೇಕು" ಎಂದು ಹೇಳಿದರು.

ಸದ್ಭಾವನಾ ಮಂಚ್ ಕಾರ್ಯದರ್ಶಿ ಎಂ.ಆರ್. ಮಾನ್ವಿ ಮಾತನಾಡಿ, "ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯ ಎಂಬ ನಾಲ್ಕು ಮೂಲಭೂತ ಮೌಲ್ಯಗಳನ್ನು ಪ್ರತಿಪಾದಿಸುವ ಸಂವಿಧಾನವು ಸಾಮಾಜಿಕ, ಆರ್ಥಿಕ, ಹಾಗೂ ರಾಜಕೀಯ ನ್ಯಾಯವನ್ನು ಪ್ರತಿಯೊಬ್ಬ ನಾಗರಿಕನಿಗೆ ಒದಗಿಸಲು ಸಂಕಲ್ಪಗೊಂಡಿದೆ" ಇಂದು ಕೇವಲ ಸಂವಿಧಾನದ ಪ್ರಸ್ತಾವನೆ ಓದುವುದು ಮಾತ್ರವಲ್ಲ, ಅದರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಬೇಕು, ಎಂದು ಹೇಳಿದರು.

ಕಾರ್ಮಿಕ ಮುಖಂಡ ರೇವಣಕರ್, "ಡಾ. ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿದ ಸಂವಿಧಾನವು ಎಲ್ಲರ ಹಕ್ಕುಗಳನ್ನು ಕಾಪಾಡುತ್ತದೆ. ಅದರ ಆಶಯಗಳನ್ನು ಅನುಸರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ" ಎಂದು ಹೇಳುವ ಮೂಲಕ ಸಂವಿಧಾನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಂಜುಮನ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಗಣೇಶ ಯಾಜಿ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ., ಮುಜಾಹಿದ್ ಮುಸ್ತಫಾ, ಮೌಲಾನ ಜಾಫರ್ ನದ್ವಿ ಹಾಗೂ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿ ಅದನ್ನು ಅರ್ಥೈಸುವ ಮೂಲಕ ಅದರ ಆಶಯಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X