Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೀಡಿನಗುಡ್ಡೆ ಮೈದಾನದ ಸರ್ವಾಂಗೀಣ...

ಬೀಡಿನಗುಡ್ಡೆ ಮೈದಾನದ ಸರ್ವಾಂಗೀಣ ಅಭಿವೃದ್ಧಿಗೆ ಚಿಂತನೆ: ರಜನಿ ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ28 Nov 2024 5:25 PM IST
share
ಬೀಡಿನಗುಡ್ಡೆ ಮೈದಾನದ ಸರ್ವಾಂಗೀಣ ಅಭಿವೃದ್ಧಿಗೆ ಚಿಂತನೆ: ರಜನಿ ಹೆಬ್ಬಾರ್

ಉಡುಪಿ, ನ.28: ಉಡುಪಿ ನಗರಸಭೆಯ ಆಧೀನದಲ್ಲಿರುವ ಬೀಡಿನ ಗುಡ್ಡೆಯ ತೆರೆದ ಮೈದಾನವನ್ನು ಉಡುಪಿ ನಗರ ಸಭೆಯ ಅಧ್ಯಕ್ಷರ ಮತ್ತು ಶಾಸಕರ ವಿಶೇಷ ಮುತುವರ್ಜಿಯಿಂದ ಸಾರ್ವಜನಿಕ ಯೋಗ್ಯ ಕ್ರಿಕೆಟ್ ಮೈದಾನವನ್ನಾಗಿ ಅಭಿವೃದ್ಧಿ ಪಡಿಸಲು ಗಂಭೀರ ಚಿಂತನೆಗಳನ್ನು ನಡೆಸಿ ಯೋಜನೆಗಳನ್ನು ಸಿದ್ಧಪಡಿಸಲಾಗಿವೆ ಎಂದು ಉಡುಪಿ ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಹೇಳಿದ್ದಾರೆ.

ಉಡುಪಿ ನಗರದ ಬೀಡಿನ ಗುಡ್ಡೆ ಮೈದಾನದಲ್ಲಿ ರವಿವಾರ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇವರು ಆಯೋಜಿಸಿದ ಗ್ಯಾರೇಜ್ ಮಾಲಕರಿಗಾಗಿ ಗ್ಯಾರೇಜ್ ಪ್ರೀಮಿಯರ್ ಲೀಗ್ - ಜಿಪಿಎಲ್ ಸೀಸನ್ -1 ಕ್ರಿಕೆಟ್ ಪಂದ್ಯ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಈ ಮೈದಾನದಲ್ಲಿ ನಿರಂತರವಾಗಿ ಕ್ರಿಕೆಟ್ ಚಟುವಟಿಕೆಗಳು ನಡೆಯುತ್ತಿವೆ. ಆದರೆ ಮೈದಾನಕ್ಕೆ ಆವರಣ ಗೋಡೆ ಇಲ್ಲದ ಕಾರಣ ಈ ಪರಿಸರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ವ್ಯಾಪಕವಾಗಿ ನಡೆಯುತ್ತಿದ್ದು ಈ ಬಗ್ಗೆ ಸಾರ್ವಜನಿಕ ದೂರುಗಳು ಬರುತ್ತಿವೆ ಎಂದರು.

ಪಂದ್ಯಕೂಟಕ್ಕೆ ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಚಾಲನೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಸೂರಜ್ ಶೆಟ್ಟಿ, ಉಡುಪಿ ಡಿವೈಎಸ್ಪಿಪ್ರಭು ಡಿ.ಟಿ. ವಿಜೇತರಿಗೆ ಬಹುಮಾನ ಗಳನ್ನು ವಿತರಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ವಹಿಸಿದ್ದರು.

ಸಂಘದ ಸ್ಥಾಪಕ ಅಧ್ಯಕ್ಷ ಪ್ರಭಾಕರ್ ಕೆ., ಚೆಯರ್‌ಮೆನ್ ವಿಲ್ಸನ್ ಅಂಚನ್, ಗೌರವ ಸಲಹೆಗಾರರಾದ ಯಾದವ್ ಶೆಟ್ಟಿ ಗಾರ್, ಜಯ ಸುವರ್ಣ ಮತ್ತು ಉದಯ್ ಕಿರಣ್, ಉಪಾಧ್ಯಕ್ಷರುಗಳಾದ ರಾಜೇಶ್ ಜತ್ತನ್ ಮತ್ತು ವಿನಯ್ ಕುಮಾರ್ ಕಲ್ಮಾಡಿ, ಕ್ರೀಡಾ ಕಾರ್ಯದರ್ಶಿ ಮಧುಸೂದನ್ ಕನ್ನರ್ಪಾಡಿ, ಪಂದ್ಯಕೂಟದ ಸಂಯೋಜಕರಾದ ರವೀಂದ್ರ ಶೇಟ್, ಮಹೇಶ್ ನಿಟ್ಟೂರು, ನವೀನ್ ಉದ್ಯಾವರ್, ಪದಾಧಿಕಾರಿಗಳಾದ ಕೃಷ್ಣ ಕಟಪಾಡಿ ಹಾಗೂ ವಿಜಯ ಸನಿಲ್, ಜಿಪಿಎಲ್ ತಂಡದ ಮಾಲಕರಾದ ಅರುಣ್ ಕುಮಾರ್ ಅಜೆಕಾರು, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಜನಾರ್ದನ್ ಅತ್ತಾವರ, ಕಿರಣ್ ರಾಜ್, ಮುರಳಿ ಕೃಷ್ಣ, ರಾಜೇಶ್, ಪುಷ್ಪರಾಜ್ ಶೆಟ್ಟಿ, ಪಂದ್ಯಕೂಟದ ಪ್ರಾಯೋಜಕ ರಾದ ಪ್ರಸನ್ನ ಕೆ.ಆರ್., ಶಶಿಧರ್ ಪೈ ಮಂಗಳೂರು, ಉದಯ್ ಕುಮಾರ್ ಉಡುಪಿ, ಪರ್ಸಿ ಸ್ಯಾಮ್ಸನ್, ಸಂತೋಷ್ ಕುಮಾರ್, ಉಡುಪಿ ಫ್ರೀ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ಅಶ್ರಫ್, ತಾಲೂಕು ಸಂಘಟನೆಗಳ ಅಧ್ಯಕ್ಷರಾದ ನಾರಾಯಣ ಆಚಾರ್ಯ ಕುಂದಾಪುರ, ನಾರಾಯಣ ಪೂಜಾರಿ ಬ್ರಹ್ಮಾವರ, ಕೃಷ್ಣಯ್ಯ ಮದ್ದೋಡಿ ಬೈಂದೂರು, ಅಬ್ದುಲ್ ಮೊಯ್ದಿನ್ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ಸ್ವಾಗತಿಸಿದರು. ವಿನಯ್ ಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X