ಲೋಕ್ ಅದಾಲತ್ನಲ್ಲಿ ಜಿಲ್ಲಾ ಗ್ರಾಹಕರ ಆಯೋಗದ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ
ಉಡುಪಿ: ಡಿಸೆಂಬರ್ 14ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ಅದಾಲತ್ನಲ್ಲಿ ರಾಜ್ಯ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥ್ಯವಾಗುವ ಪ್ರಕರಣಗಳನ್ನು ಲೋಕ್ ಅದಾಲತ್ಗೆ ಗುರುತಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮಕೈಗೊಳ್ಳಲಾಗುವುದು.
ಆದ್ದರಿಂದ ಜಿಲ್ಲೆಯ ಗ್ರಾಹಕರು, ವಕೀಲರು ಹಾಗೂ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗದ ಸಹಾಯಕ ಆಡಳಿತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story