ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ; ಕುಟುಂಬದ ಸದಸ್ಯರಿಗೆ ಸಾಂತ್ವನ

ಕುಂದಾಪುರ: ಹುತಾತ್ಮ ಯೋಧ ಅನೂಪ್ ಪೂಜಾರಿ ಬೀಜಾಡಿ ಅವರ ಮನೆಗೆ ಕರ್ನಾಟಕ ವಿಧಾನಸಭ್ಯಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಮುಖಂಡರಾದ ಅಶೋಕ್ ಪೂಜಾರಿ ಬೀಜಾಡಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ್ ಶೆಟ್ಟಿ, ಹಿರಿಯಣ್ಣ ಕುಂದಾಪುರ, ಹರಿಪ್ರಸಾದ್ ಶೆಟ್ಟಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.
Next Story





