Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ:...

ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಡಾ.ತಿಪ್ಪೇಸ್ವಾಮಿ ಕೆ.ಟಿ.

‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ4 Jan 2025 8:24 PM IST
share
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಡಾ.ತಿಪ್ಪೇಸ್ವಾಮಿ ಕೆ.ಟಿ.

ಉಡುಪಿ, ಜ.4: ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.

ಶನಿವಾರ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹ ಯೋಗದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ವಿಷಯದ ಕುರಿತು ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳು ಅತೀ ಹೆಚ್ಚಿನ ಸಮಯವನ್ನು ಮನೆ, ಶಾಲೆ ಹಾಗೂ ಅವರ ನೆರೆಹೊರೆಯವರೊಂದಿಗೆ ಕಳೆಯುತ್ತಾರೆ. ಮಕ್ಕಳ ರಕ್ಷಣೆಗಾಗಿ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಭೌತಿಕ ಅಪಘಾತ, ದೌರ್ಜನ್ಯ ಸೇರಿದಂತೆ ಕೆಲವೊಂದು ದುರ್ಘಟನೆಗಳು ಅಲ್ಲಲ್ಲಿ ನಡೆಯುವುದು ಕಂಡುಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶಾಲಾ ಆವರಣ ಹಾಗೂ ಶಾಲಾ ಚಟುವಟಿಕೆಗಲ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ನೀಡಿರುವ ಮಾರ್ಗಸೂಚನೆಗಳನ್ನು ಇಲಾಖೆಗಳ ಸಮನ್ವಯತೆ ಯೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರಿಂದ ಮಕ್ಕಳ ಮೇಲೆ ಉಂಟಾಗುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದವರು ಅಭಿಪ್ರಾಯಪಟ್ಟರು.

ಕ್ರಮದ ಎಚ್ಚರಿಕೆ: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯ ನಿಯಮಾವಳಿಗಳನ್ನು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿಸಿಎಂ, ಅಲ್ಪಸಂಖ್ಯಾತ, ಸಮಾಜಕಲ್ಯಾಣ, ಕೋಚಿಂಗ್ ಸೆಂಟರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜನವರಿ 30ರ ಒಳಗೆ ಅನುಷ್ಠಾನಗೊಳಿಸಿ, ಅದರ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಆಯೋಗವು ಮುಂದಿನ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವರದಿಯನ್ನು ಅನುಷ್ಠಾನ ಮಾಡದಿರುವುದು ಕಂಡುಬಂದಲ್ಲಿ ಹಾಗೂ ತಪ್ಪು ಮಾಹಿತಿ ನೀಡಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದು, ಜನವರಿ 30ರ ಒಳಗೆ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡುವುದರೊಂದಿಗೆ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿ ಯಾಗುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮಾತನಾಡಿ, ಕಾನೂನಿನ ಬಗ್ಗೆ ಅರಿವು ಹೊಂದುವ ಆಸಕ್ತಿ ಪ್ರತಿಯೊಬ್ಬರಲ್ಲೂ ಇರಬೇಕು. ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದಿದಾಗ ಶಾಲೆಯಲ್ಲಿ ಕಲಿಯುವ ಸಂದರ್ಭದಲ್ಲಿ ಮಕ್ಕಳ ಮೇಲೆ ಆಗುವ ನೇರ ಅಥವಾ ಪರೋಕ್ಷ ದೌರ್ಜನ್ಯ ಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕಾರ್ಯಾಗಾರವು ಕಾನೂನಿನ ಬಗ್ಗೆ ಅರಿವು ಮೂಡಿಸುವ ಮಹತ್ವದ ಉದ್ದೇಶ ಹೊಂದಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದ ಅಧಿಕಾರಿಗಳು ತಮ್ಮ ಸೇವೆಯಲ್ಲಿ ಅಳವಡಿಸಿಕೊಂಡು ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಅವರ ಬಾಲ್ಯದ ಅಮೂಲ್ಯ ಕ್ಷಣಗಳನ್ನು ಸವಿಯಲು ಅನುವು ಮಾಡಿಕೊಡಬೇಕು. ಸಮಾಜದಲ್ಲಿ ಆಗುವ ಬದಲಾವಣೆಗೆ ಸಂಬಂಧಿಸಿದಂತೆ ಕಾಯಿದೆಗಳು ಆಗಾಗ ತಿದ್ದುಪಡಿ ಆಗುತ್ತಿರುತ್ತವೆ. ಆದ್ದರಿಂದ ಕಾರ್ಯಾಗಾರದಲ್ಲಿ ಭಾಗವಹಿಸುವ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆದು ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಮಾತ್ರ ಕಾರ್ಯಾಗಾರ ಯಶಸ್ವಿಯಾ ಗುತ್ತವೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಯುನಿಸೆಫ್‌ನ ಸಿಸ್ಟರ್ ದುಲ್ಸಿನಾ ಕ್ರಾಸ್ತಾ ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ವಹಿಸಬೇಕಾದ ಸೂಕ್ಷ್ಮತೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿ ಕಾರಿ ಪ್ರಭು ಡಿ.ಟಿ, ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ಮನುಪಟೇಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕ ಮಾತು ಗಳನ್ನಾಡಿ ಸ್ವಾಗತಿಸಿದರು, ಜ್ಯೋತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X