ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿ ಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಇದರಲ್ಲಿ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುತ್ತದೆ.
ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಜನವರಿ 20ರ ಒಳಗೆ ತಮ್ಮ ಸ್ವ-ವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಗಳನ್ನು ಸ್ಕ್ಯಾನ್ ಮಾಡಿ -karnatakamediaacademy@gmail.com- ಗೆ ಇ-ಮೇಲ್ ಮೂಲಕ ಕಳುಹಿಸುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಕಟಣೆ ತಿಳಿಸಿದೆ.





