Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಬಸ್ ಪ್ರಯಾಣ ದರ ಹೆಚ್ಚಳ...

ಸರಕಾರಿ ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಸಿಪಿಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Jan 2025 7:02 PM IST
share
ಸರಕಾರಿ ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಸಿಪಿಎಂ ಪ್ರತಿಭಟನೆ

ಕುಂದಾಪುರ, ಜ.6: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಇಂದು ವಂಡ್ಸೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಕೇಂದ್ರ ಸರಕಾರದ ಬೆಲೆಯೇರಿಕೆ ನೀತಿಯಿಂದಾಗಿ ಜನರು ಈಗಾಗಲೇ ಬದುಕು ನಿರ್ವಹಿಸಲು ಕಷ್ಟಪಡುತ್ತಿದ್ದಾರೆ. ಇದರ ಮಧ್ಯೆಯೇ ರಾಜ್ಯ ಸರಕಾರ ಬಡವರ ಜೀವನಾಡಿಯಾದ ಸರಕಾರಿ ಬಸ್‌ಗಳ ಪ್ರಯಾಣ ದರ ಏರಿಕೆ ಮಾಡಿರುವುದು ಖಂಡನೀಯ ಎಂದು ಹೇಳಿದರು.

ಸರಕಾರಿ ಬಹುತೇಕ ಬಸ್‌ಗಳು ಗ್ರಾಮೀಣ ಪ್ರದೇಶಗಳಲ್ಲಿ ಓಡುತ್ತಿರುವುದ ರಿಂದ ನಷ್ಟಗಳು ಸಂಭವಿಸುತ್ತಿರುವುದು ಸಹಜ. ಆದರೆ ಸರಕಾರ ನಿಗಮಗಳಿಗೆ ಪೂರೈಕೆ ಮಾಡುವ ಇಂಧನದ ಮೇಲೆ ಸಬ್ಸಿಡಿ ನೀಡಬೇಕು ಮತ್ತು ತೆರಿಗೆ ಕಡಿಮೆ ಮಾಡ ಬೇಕು ಹಾಗೂ ಇಲೆಕ್ಟ್ರಿಕ್ ಬಸ್‌ಗಳಿಗೆ ಹೆಚ್ಚು ಪ್ರಾಧಾನ್ಯತೆ ಕೊಡಬೇಕು ಎಂದು ಅವರು ಆಗ್ರಹಿಸಿದರು.

ಕೋವಿಡ್ ಸಂದರ್ಭದಲ್ಲಿ ಹೆಚ್ಚಿಸಿದ ಪ್ರಯಾಣ ದರ ಕೋವಿಡ್ ಅನಂತರ ಇಳಿಸಿಲ್ಲ. ಡೀಸೆಲ್ ದರ ಇಳಿಕೆಯಾದಾಗಲೂ ಕೂಡ ಪ್ರಯಾಣ ದರ ಇಳಿಕೆ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಸುರೇಶ್ ಕಲ್ಲಾಗರ, ಈಗಾಗಲೇ ಖಾಸಗಿ ಬಸ್‌ಗಳು ಜಿಲ್ಲೆಗಳಲ್ಲಿ ಹಾಗೂ ರಾಜ್ಯಗಳಲ್ಲಿ ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿರುವುದರಿಂದ ದರ ಹೆಚ್ಚಳಕ್ಕೆ ಸರಕಾರ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಮುಖಂಡರಾದ ಕೆ.ಶಂಕರ, ಭಾಸ್ಕರ್ ಶಾರ್ಕೆ, ಪ್ರಭಾಕರ ಗಾಣಿಗ, ನೇತ್ರಾವತಿ, ಗುಲಾಬಿ, ಗಿರಿಜಾ, ಮೂಕಾಂಬಿಕಾ, ಕೇಶವ ಮೊದಲಾದವರು ಉಪಸ್ಥಿತರಿದ್ದರು.

‘ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ಸರಕಾರ ಅವಕಾಶ ನೀಡಬಾರದು. ಖಾಸಗಿ ಬಸ್ ಮಾಲಕರು ಸರಕಾರಿ ಬಸ್‌ಗಳ ಪ್ರಯಾಣ ದರ ನೆಪವಾಗಿಟ್ಟು ಕೊಂಡು ಪ್ರಯಾಣ ದರ ಏರಿಕೆ ಮಾಡಬಾರದು. ಈಗಾಗಲೇ ಹಬ್ಬದ ದಿನಗಳಲ್ಲಿ ಮನಸ್ಸೋ ಯಿಚ್ಚೆ, ಕಾನೂನು ಬಾಹಿರವಾಗಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದು ಸರಕಾರಕ್ಕೆ ಗೊತ್ತಿದ್ದರೂ ಖಾಸಗೀ ಬಸ್‌ಗಳ ಮಾಲೀಕರ ಮೇಲೆ ಯಾವುದೇ ಕ್ರಮ ವಹಿಸಿಲ್ಲ’

-ಸುರೇಶ್ ಕಲ್ಲಾಗರ್, ಕಾರ್ಯದರ್ಶಿ ಸಿಪಿಎಂ ಉಡುಪಿ ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X