Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೊದಲ ಕರ್ನಾಟಕ ಕ್ರೀಡಾಕೂಟ: ಉಡುಪಿಯಲ್ಲಿ...

ಮೊದಲ ಕರ್ನಾಟಕ ಕ್ರೀಡಾಕೂಟ: ಉಡುಪಿಯಲ್ಲಿ ಸಮಾರೋಪ

ಸಮರ್ಪಕ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿಗಳಿಂದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Jan 2025 9:41 PM IST
share
ಮೊದಲ ಕರ್ನಾಟಕ ಕ್ರೀಡಾಕೂಟ: ಉಡುಪಿಯಲ್ಲಿ ಸಮಾರೋಪ

ಉಡುಪಿ, ಜ.10: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಜನವರಿ 17ರಿಂದ 23ರವರೆಗೆ ನಡೆಯಲಿ ರುವ ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉಡುಪಿಯಲ್ಲಿ ಆಯೋಜಿಸ ಲಿದ್ದು, ಇದಕ್ಕಾಗಿ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಲಾಗಿ ರುವ ವಿವಿಧ ಸಮಿತಿಗಳ ಸದಸ್ಯರು ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸ ಬೇಕು ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳಿಗೆ ತಂಗಲು ವಸತಿ ಗೃಹಗಳ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಚಟುವಟಿಕೆ ನಡೆಸಲು ಸುವ್ಯವಸ್ಥಿತ ಮೈದಾನ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವುದರ ಜೊತೆಗೆ, ಯಾರಿಗೂ ಯಾವುದೇ ರೀತಿಯ ತೊಂದರೆಗಳಾಗದಂತೆ ಉಪ ಸಮಿತಿಗಳ ಸದಸ್ಯರು ಜವಾಬ್ದಾರಿ ವಹಿಸಿ ಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಪ್ರತಿಯೊಬ್ಬರೂ ನಮಗೆ ಅತಿಥಿಗಳಿದ್ದಂತೆ. ಅವರ ಸಂಚಾರಕ್ಕೆ ವಾಹನಗಳ ವ್ಯವಸ್ಥೆ ಮಾಡಬೇಕು, ಅಗತ್ಯಕ್ಕಾಗಿ ಆಂಬುಲೆನ್ಸ್ ವ್ಯವಸ್ಥೆ, ಮೈದಾನಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆದು ಸೂಕ್ತ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಜ.23ರಂದು ಸಂಜೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರೋಪ ಸಮಾರಂಭಕ್ಕೆ, ವೇದಿಕೆ ಕಾರ್ಯ ಕ್ರಮಕ್ಕೆ ಅಗತ್ಯವಿರುವ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಸಚಿವರು, ಜನಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಆಹ್ವಾನಿಸ ಬೇಕು. ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಬೇಕು ಎಂದರು.

ಜಿಲ್ಲೆಯ ಪ್ರವಾಸೋದ್ಯಮ ತಾಣಗಳನ್ನು ಪರಿಚಯಿಸುವ ಆಕರ್ಷಕ ವಿಡಿಯೋ ತುಣುಕುಗಳನ್ನು ವೇದಿಕೆ ಕಾರ್ಯಕ್ರಮದಲ್ಲಿ ಪ್ರದರ್ಶಿಸಬೇಕು ಹಾಗೂ ಮೈದಾನದಲ್ಲಿ ಊಟದ ವ್ಯವಸ್ಥೆ ನಡೆಯುವ ಪ್ರದೇಶದಲ್ಲೂ ಇವುಗಳ ಪ್ರದರ್ಶನದಿಂದ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದರು.

ಉಡುಪಿಯಲ್ಲಿ ಸೈಕ್ಲಿಂಗ್ ಸ್ಪರ್ಧೆ: ಕ್ರೀಡಾಕೂಟದ ಸೈಕ್ಲಿಂಗ್ ಸ್ಪರ್ಧೆ ಜಿಲ್ಲೆ ಯಲ್ಲಿ ನಡೆಯಲಿದ್ದು, ಸ್ಪರ್ಧೆಗಳ ಸಂದರ್ಭದಲ್ಲಿ ರೇಸ್ ನಡೆಯುವ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಬರ್ಂಧಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊ ಡಬೇಕು ಎಂದ ಜಿಲ್ಲಾಧಿಕಾರಿಗಳು, ಕ್ರೀಡಾ ಚಟುವಟಿಕೆ ನಡೆಯುವ ಸ್ಥಳಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಡಿ.ಟಿ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X