ಉಡುಪಿ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಜ.16: ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯ ಆದಿಉಡುಪಿ ಮಸೀದಿ ಬಳಿ ಉಡುಪಿ ನಗರಸಭೆಯ ಕುಡಿಯುವ ನೀರಿನ ಮುಖ್ಯ ಕೊಳವೆ ಹಾದು ಹೋಗಿದ್ದು, ಸದರಿ ಮುಖ್ಯ ಕೊಳವೆಯ ದುರಸ್ಥಿ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 18ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆ ಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
Next Story





