ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.16: ಶೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜ್ವಲ್(29) ಎಂಬವರು ಟ್ರೆಡಿಂಗ್ ಬಗ್ಗೆ ಗೂಗಲ್‌ನಲ್ಲಿ ಸರ್ಚ್ ಮಾಡುವಾಗ ಮಾಡುತ್ತೀರುವಾಗ ಲಿಂಕ್ ಒಂದರಲ್ಲಿ ಶೇರು ಮಾರುಕಟ್ಟೆಯ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿದ್ದು, ಈ ಮೂಲಕ ಪ್ರಜ್ವಲ್ ಅವರನ್ನು ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಹಣವನ್ನು ಹೂಡಿಕೆ ಮಾಡಲು ತಿಳಿಸಲಾಗಿತ್ತು.
ಅದನ್ನು ನಂಬಿದ ಪ್ರಜ್ವಲ್ ಅಪರಿಚಿತರು ಸೂಚಿಸಿದ ವಿವಿಧ ಖಾತೆಗಳಿಗೆ ಜ.10 ಮತ್ತು 11ರಂದು ಹಂತ ಹಂತವಾಗಿ ಒಟ್ಟು 3,17,015ರೂ. ಹಣವನ್ನು ಹೂಡಿಕೆ ಮಾಡಿದ್ದು ತದನಂತರ ಆರೋಪಿಗಳು ಹಣ ವಾಪಾಸ್ಸು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.
Next Story





