ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಉದ್ಘಾಟನೆ

ಮಣಿಪಾಲ, ಜ.17: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮೂರು ದಿನಗಳ ಕಾಲ ಮಣಿಪಾಲ ಎಂಡ್ ಪಾಯಿಂಟ್ ಮೈದಾನದಲ್ಲಿ ಹಮ್ಮಿಕೊಳ್ಳ ಲಾಗಿರುವ ಮಣಿಪಾಲ 4ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್(ಕೆಎಚ್-ಸಿಸಿಎಲ್) 2025ಕ್ಕೆ ಇಂದು ಚಾಲನೆ ನೀಡಲಾಯಿತು.
ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಉಪ ಕುಲಪತಿ ಲೆ.ಜ.(ಡಾ) ಎಂ.ಡಿ.ವೆಂಕಟೇಶ್ ಜಂಟಿಯಾಗಿ ಪ್ರತಿಷ್ಠಿತ ಟ್ರೋಫಿಯನ್ನು ಅನಾವರಣಗೊಳಿಸುವ ಪಂದ್ಯಾಟವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಹೆ ಸಿಓಓ ಡಾ.ರವಿರಾಜ್ ಎನ್.ಎಸ್., ಮಾಹೆ ಸಹ ಉಪಕುಲಪತಿ ಡಾ.ಶರತ್ ಕುಮಾರ್ ರಾವ್, ಸಲಹೆಗಾರ ಸಿ.ಜಿ.ಮುತ್ತಣ್ಣ, ಮಣಿಪಾಲದ ಭೋದನಾ ಆಸ್ಪತ್ರೆಗಳ ಸಿಓಓ ಡಾ.ಆನಂದ್ ವೇಣುಗೋಪಾಲ್, ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ, ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ ಡೀನ್ ಡಾ.ಜಿ.ಅರುಣ್ ಮಯ್ಯ, ಮಾರುಕಟ್ಟೆ ಮುಖ್ಯಸ್ಥ ಸಚಿನ್ ಕಾರಂತ್, ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು
ಕ್ರಿಕೆಟ್ ಪಂದ್ಯಾಟದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾರ್ಪೊರೇಟ್ ಕಂಪೆನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಒಟ್ಟು 24 ತಂಡಗಳು ಭಾಗವಹಿಸಲಿವೆ.





