Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ನಾಟಕ ಕ್ರೀಡಾಕೂಟದ ಮೊದಲ ಚಿನ್ನದ ಪದಕ...

ಕರ್ನಾಟಕ ಕ್ರೀಡಾಕೂಟದ ಮೊದಲ ಚಿನ್ನದ ಪದಕ ಗೆದ್ದ ಸಮರಾ ಚಾಕೋ

ವಾರ್ತಾಭಾರತಿವಾರ್ತಾಭಾರತಿ17 Jan 2025 8:04 PM IST
share
ಕರ್ನಾಟಕ ಕ್ರೀಡಾಕೂಟದ ಮೊದಲ ಚಿನ್ನದ ಪದಕ ಗೆದ್ದ ಸಮರಾ ಚಾಕೋ

ಉಡುಪಿ-ಮಂಗಳೂರಿನಲ್ಲಿ ಒಂದು ವಾರ ಕಾಲ ನಡೆಯುವ ಮೂರನೇ ಕರ್ನಾಟಕ ಕ್ರೀಡಾಕೂಟದಲ್ಲಿ ಕ್ರೀಡಾಳುಗಳಿಗೆ ಗೆಲ್ಲಲು 631 ಚಿನ್ನದ ಪದಕ ಗಳಿದ್ದರೂ, ಮೊದಲ ಪದಕವನ್ನು ಗೆದ್ದು ಹೆಗ್ಗಳಿಕೆಯನ್ನು ಬೆಂಗಳೂರು ನಗರದ ಸಮರಾ ಚಾಕೋ ಪಡೆದರು.

ಕ್ರೀಡಾಕೂಟದಲ್ಲಿ ಫಲಿತಾಂಶ ದೊರಕಿದ ಮೊದಲ ಸ್ಪರ್ಧೆಯಾದ ಮಹಿಳೆಯರ 500ಮೀ. ಕಯಾಕಿಂಗ್ ಕೆ-1 ಸ್ಪರ್ಧೆಯಲ್ಲಿ ಅವರು ನಿರೀಕ್ಷೆಯಂತೆ ಮೊದಲಿಗರಾಗಿ ಗುರಿಮುಟ್ಟಿ ಕೂಟದ ಮೊಚ್ಚಮೊದಲ ಚಿನ್ನದ ಪದಕ ಗೆದ್ದುಕೊಂಡರು. ಕೆಲವೇ ಗಂಟೆಗಳ ಅಂತರದಲ್ಲಿ ಅವರು ಇನ್ನೂ ಮೂರು ಚಿನ್ನದ ಪದಕಗಳನ್ನು ಜಯಿಸಿ ಮೊದಲ ದಿನವೇ ನಾಲ್ಕು ಚಿನ್ನದ ಪದಕ ಗೆದ್ದ ವಿಶಿಷ್ಟ ಸಾಧನೆ ಮಾಡಿದರು.

ಬೆಂಗಳೂರಿನವರಾದ 19ವರ್ಷ ಪ್ರಾಯದ ಸಮರಾ ಎ.ಚಾಕೋ ಬಿಬಿಎಂ ವಿದ್ಯಾರ್ಥಿನಿಯಾಗಿದ್ದು ಇದೀಗ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸುವ ಅರ್ಹತೆ ಪಡೆದುಕೊಂಡಿದ್ದಾರೆ. ಈವರೆಗೆ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ದೇಶವನ್ನೂ ಪ್ರತಿನಿಧಿಸಿದ್ದ ಇವರು ಹಲವಾರು ಪದಕಗಳನ್ನು ಗೆದ್ದು ಕೊಂಡಿದ್ದರು. ಇದೇ ತಿಂಗಳ 28ರಿಂದ ಉತ್ತರಖಂಡದಲ್ಲಿ ಪ್ರಾರಂಭ ಗೊಳ್ಳುವ 38ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ಕಯಾಕಿಂಗ್ ಕೆ-1ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದು, ಅಭ್ಯಾಸನಿರತರಾಗಿದ್ದಾರೆ.

ಎರಡು ವರ್ಷಗಳಿಂದ ವಾಟರ್‌ಸ್ಪೋರ್ಟ್ಸ್‌ನಲ್ಲಿ ಸಕ್ರಿಯರಾಗಿರುವ ಸಮರಾ ಏಷ್ಯನ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಿ ದ್ದಾಗಿ ತಿಳಿಸಿದರು. ಕಯಾಕಿಂಗ್‌ನಲ್ಲಿ ದೇಶಕ್ಕೆ ಪದಕ ಗೆಲ್ಲುವ ಅತ್ಯುತ್ತಮ ಅವಕಾಶವಿರುವುದರಿಂದ ತಾನು ಈ ಕ್ರೀಡೆಯಲ್ಲಿ ಆಸಕ್ತಳಾಗಿರುವುದಾಗಿ ಸಮರಾ ತಿಳಿಸಿದರು. ಒಲಿಂಪಿಕ್ಸ್‌ನಲ್ಲೂ ಸ್ಪರ್ಧಿಸಲು ಅರ್ಹತೆ ಪಡೆಯುವ ಅವಕಾಶವಿರುವುದ ರಿಂದ ತಾನು ತುಂಬು ಆಸಕ್ತಿಯಿಂದ ಇದರಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿದರು.

ಕಯಾಕಿಂಗ್‌ನ್ನೇ ಯಾಕೆ ಆಯ್ಕೆ ಮಾಡಿಕೊಂಡಿರಿ ಎಂದು ಪ್ರಶ್ನಿಸಿದಾಗ, ಈ ಕ್ರೀಡೆಯಲ್ಲಿ ಮಹಿಳೆಯರಿಗೆ ಉತ್ತಮ ಅವಕಾಶ ವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಲು ಅವಕಾಶವಿದೆ. ಅದಕ್ಕೆ ನಂಗೆ ಈ ಸ್ಪೋರ್ಟ್ಸ್ ತುಂಬಾ ಇಷ್ಟವಾಯಿತು ಎಂದರು.

‘ಎರಡು ವರ್ಷದಿಂದ ಕಯಾಕಿಂಗ್ ಅಭ್ಯಾಸ ನಡೆಸುತಿದ್ದೇನೆ. ಮೊದಲ ಒಂದು ವರ್ಷ ಬ್ಯಾಲೆನ್ಸಿಂಗ್ ಅಭ್ಯಾಸ ಮಾಡಿದೆ. ವೈಎಂಸಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಿದ್ದೇನೆ. ಕಳೆದೊಂದು ತಿಂಗಳಿನಿಂದ ಉಡುಪಿಯಲ್ಲಿ ಅಭ್ಯಾಸ ನಡೆಸಿದ್ದೇನೆ.’ ಎಂದು ಸಮರಾ ತಿಳಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X