Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ...

ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Jan 2025 5:28 PM IST
share
ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ

ಉಡುಪಿ: ಉಡುಪಿ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮೂಲಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ಕಲ್ಸಂಕ ಜಂಕ್ಷನ್, ಉಡುಪಿ ಶ್ರೀಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಅವರು ಸಂಸದರಿಗೆ ತಿಳಿಸಿದರು.

ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರೊಂದಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಕಲ್ಸಂಕ ಜಂಕ್ಷನ್‌ನಲ್ಲಿ ಅವೈಜ್ಞಾನಿಕ ಕ್ರಮ

ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ ರಸ್ತೆಗೆ ಕಲ್ಸಂಕ ಸರ್ಕಲ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಮುಚ್ಚಿ ಈ ರಸ್ತೆಯಲ್ಲಿ ಬರುವ ವಾಹನಗಳು ಉಡುಪಿ ನಗರ ಪ್ರವೇಶಿಸಲು ಕಡಿಯಾಳಿ ಭಾಗದಲ್ಲಿ ಅವಕಾಶ ನೀಡಿರುವುದು ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ತಕ್ಷಣದಲ್ಲಿ ಮುಚ್ಚಿರುವ ರಸ್ತೆಯನ್ನು ತೆರವುಗೊಳಿಸಿ ಈ ಹಿಂದಿನಂತೆ ಸಂಚಾರ ವ್ಯವಸ್ಥೆಗೆ ಅವಕಾಶ ನೀಡಬೇಕು ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಉಡುಪಿ ನಗರ ಪ್ರವೇಶಿಸುವ ರಸ್ತೆಗಳ ವಾಹನ ದಟ್ಟಣೆಯನ್ನು ನಿಯಂತ್ರಿಸಲು ರಸ್ತೆಗಳನ್ನು ಮುಚ್ಚುವುದು ಪರಿಹಾರವಲ್ಲ. ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ಈಗಾಗಲೆ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ತಕ್ಷಣದಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X