Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ನಾಟಕ ಕ್ರೀಡಾಕೂಟ| ಆಟ ವೀಕ್ಷಿಸಿ,...

ಕರ್ನಾಟಕ ಕ್ರೀಡಾಕೂಟ| ಆಟ ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ18 Jan 2025 7:56 PM IST
share
ಕರ್ನಾಟಕ ಕ್ರೀಡಾಕೂಟ| ಆಟ ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ ಕರೆ

ಉಡುಪಿ, ಜ.18: ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಣಿಪಾಲ ಮಾಹೆಯ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ಮೂಲೆ ಮೂಲೆ ಗಳಿಂದ ಆಗಮಿಸಿದ ಕ್ರೀಡಾ ಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡುತಿದ್ದಾರೆ. ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಖುದ್ದಾಗಿ ಹಾಜರಿದ್ದು, ವಿವಿ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದಲ್ಲದೇ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಉಡುಪಿಯ ಯುವಜನತೆಗೆ ಕರೆ ನೀಡಿದ್ದಾರೆ.

ಶನಿವಾರ ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಉನ್ನತ ಸ್ಥಾನ ಪಡೆದ ರಾಜ್ಯದ 8 ಕ್ರೀಡಾ ಸ್ಪರ್ಧಿಗಳು ಅಥವಾ ತಂಡಗಳು ಭಾಗವಸುತಿವೆ. ಕ್ರೀಡಾ ಸ್ಪರ್ಧೆ ಗಳನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು, ಕ್ರೀಡಾಪಟುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಈ ವೇಳೆ ಉಪಸ್ಥಿತರಿದ್ದು ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ಇದೇ ಜನವರಿ 23ರಂದು ಸಂಜೆ 5 ಗಂಟೆಗೆ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸ ಬೇಕು ಎಂದವರು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕ್ರೀಡಾ ಚಟವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಶಾಲಾ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು. ಕ್ರೀಡೆ ಮಾನವನ ಸದೃಢ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದ ಅವರು, ರಾಜ್ಯ ಸರಕಾರದ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ನೇಮಕಾತಿಯ ಸಂದರ್ಭದಲ್ಲಿ ಶೇ. 2ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಾಗಿರುತ್ತವೆ. ಆದ್ದರಿಂದ ಕ್ರೀಡೆ ಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದರು.

ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್. ಮಾತನಾಡಿ, ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಅದ್ಧೂರಿಯಾಗಿ ನಡೆಯಲಿದ್ದು, ಆಳ್ವಾಸ್ ವಿರಾಸತ್‌ನ ವಿದ್ಯಾರ್ಥಿಗಳ ತಂಡದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸೌಂಡ್ ಆಂಡ್ ಲೈಟ್ಸ್ ಕಾರ್ಯಕ್ರಮ ಸಹ ಅಂದು ಸಂಜೆ ನಡೆಯಲಿದೆ ಎಂದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯ ಬಗ್ಗೆ ಮಕ್ಕಳಿಗೆ ಹಾಗೂ ಯುವ ಜನರಿಗೆ ದೇಹಕ್ಕೆ ಹಾಗೂ ಮನಸ್ಸಿಗೆ ಆಗುವ ಲಾಭಗಳ ಬಗ್ಗೆ ಅವರುಗಳಲ್ಲಿ ಅರಿವು ಮೂಡಿಸಿ, ಕ್ರೀಡಾ ಚಟವಟಿಕೆಗಳಲ್ಲಿ ಭಾಗವಸುವುದು, ವೀಕ್ಷಿಸುವುದಕ್ಕೆ ಪ್ರೋತ್ಸಾಹಿಸಬೇಕು ಎಂದರು.

ಸಭೆಯಲ್ಲಿ ಎಎಸ್ಪಿ ಸಿದ್ಧಲಿಂಗಪ್ಪ, ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X