ಪೆರ್ಡೂರು: ಶಾಸಕರು, ಸಂಸದರಿಂದ ಗ್ರಾಮಸ್ಥರ ಅಹವಾಲು ಸ್ವೀಕಾರ

ಉಡುಪಿ: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಜರಗಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, 94 ಸಿ ಅಡಿಯಲ್ಲಿ 13 ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ಹಾಗೂ 10 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಮಾಡಿದರು.
ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಹಾಗೂ 94 ಸಿ/ 94 ಸಿ.ಸಿ ಅಡಿಯಲ್ಲಿ ಬಾಕಿ ಇರುವ ಕಡತಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸುಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಪಂ ಅಧ್ಯಕ್ಷೆ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಪ್ರಸಾದ್ ಮಲ್ಯ, ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಉಡುಪಿ ತಹಶೀಲ್ದಾರ ಗುರುರಾಜ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ, ಪೆರ್ಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.





